ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂಭಮೇಳಕ್ಕೆ ತೆರಳುವವರಿಗೆ ಗುಡ್ ನ್ಯೂಸ್: ಸಚಿವ ಜೋಶಿ ಸೂಚನೆ ಬೆನ್ನಲ್ಲೇ ಪ್ರಯಾಗ ವಿಮಾನ ಟಿಕೆಟ್ ದರ 50% ಇಳಿಕೆ

ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಕೋಟ್ಯಂತರ ಭಕ್ತರು ತೆರಳುತ್ತಿದ್ದಾರೆ. ಆದರೆ ಪ್ರಯಾಗ್‌ರಾಜ್‌ಗೆ ಸೇವೆ ನೀಡುತ್ತಿರುವ ವಿಮಾನಯಾನ ಸಂಸ್ಥೆಗಳ ದರ ಏರಿಕೆ ಬರೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಡಿವಾಣ ಹಾಕಿದ್ದಾರೆ.

ವಿಮಾನಯಾನ ಕಂಪನಿಗಳ ಟಿಕೆಟ್ ದರ ಭಾರಿ ಏರಿಕೆಯ ಬಗ್ಗೆ ಪ್ರಹ್ಲಾದ್ ಜೋಶಿ ಬುಧವಾರ ನಾಗರಿಕ ವಿಮಾನಯಾನ ನಿರ್ದೇಶನಾಲಯಕ್ಕೆ ಪತ್ರ ಬರೆದು ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಈ ಬೆನ್ನಲ್ಲೇ ನಾಗರಿಕ ವಿಮಾನಯಾನ ನಿರ್ದೇಶನಾಲಯ ಟಿಕೆಟ್ ದರ ಕಡಿತಗೊಳಿಸಲು ವಿಮಾನಯಾನ ಕಂಪನಿಗಳಿಗೆ ಸೂಚನೆ ನೀಡಿದೆ. ಇದರ ಪರಿಣಾಮವಾಗಿ ಇಂಡಿಗೋ ಸೇರಿದಂತೆ ಹಲವು ವಿಮಾನಯಾನ ಕಂಪನಿಗಳು ಪ್ರಯಾಗ್‌ರಾಜ್‌ಗೆ ತೆರಳುವ ವಿಮಾನಗಳ ಟಿಕೆಟ್ ದರವನ್ನು ಶೇ.30ರಿಂದ ಶೇ.50ರವರೆಗೂ ಇಳಿಸಿವೆ.

Edited By : Vijay Kumar
PublicNext

PublicNext

30/01/2025 02:51 pm

Cinque Terre

14.19 K

Cinque Terre

3

ಸಂಬಂಧಿತ ಸುದ್ದಿ