ಚಿಕ್ಕಮಗಳೂರು : ಬಿಜೆಪಿ ಜಿಲ್ಲಾ ಅಧ್ಯಕ್ಷರಾಗಿ ದೇವರಾಜ್ ಶೆಟ್ಟಿ ಪುನರಾಯ್ಕೆಯಾಗಿದ್ದಾರೆ. ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಚುನಾವಣಾ ಅಧಿಕಾರಿ ಕೆ.ಟಿ ಚೇತನ್ ಕುಮಾರ್ ನೇತೃತ್ವದಲ್ಲಿ ನಡೆದ ಚುನಾವಣೆಯಲ್ಲಿ ದೇವರಾಜ್ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿ ಜಿಲ್ಲಾ ಪ್ರತಿನಿಧಿಯಾಗಿ ಕುರುವಂಗಿ ವೆಂಕಟೇಶ್ ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ ನನ್ನ ಮೇಲೆ ನಂಬಿ ಇಟ್ಟು ಮತ್ತೊಮ್ಮೆ ಜವಾಬ್ದಾರಿಯನ್ನು ನೀಡಲಾಗಿದೆ. ಅದನ್ನು ಸಮರ್ಥವಾಗಿ ನಿಭಾಯಿಸುವ ಕೆಲಸವನ್ನು ಮಾಡುತ್ತೇನೆ ಇದಕ್ಕೆ ನಿಮ್ಮೆಲ್ಲರ ಸಹಕಾರ ಬೇಕೆಂದರು. ಮರು ಆಯ್ಕೆಯಾದ ಜಿಲ್ಲಾಧ್ಯಕ್ಷರಿಗೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಎನ್.ಮಹೇಶ್, ಮಾಜಿ ಸಚಿವ ಜೀವರಾಜ್, ಅಪೇಕ್ಸ್ ಬ್ಯಾಂಕ್ ಅಧ್ಯಕ್ಷ ಬೆಳ್ಳಿ ಪ್ರಕಾಶ್, ಸೇರಿದಂತೆ ಕಾರ್ಯಕರ್ತರು ಮುಖಂಡರು ಶುಭ ಹಾರೈಸಿದರು .
PublicNext
30/01/2025 04:20 pm