ಮಡಿಕೇರಿ : ಕೊಡವ ಹಾಗೂ ಕೊಡವ ಭಾಷಿಕ ಸಮುದಾಯಗಳ ಸಂಸ್ಕೃತಿಯ ಭದ್ರತೆಗಾಗಿ ಮತ್ತು ಹಕ್ಕುಗಳಿಗಾಗಿ ಒತ್ತಾಯಿಸಿ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕುಟ್ಟ ದಿಂದ ಮಡಿಕೇರಿಯವರೆಗೆ ಅಖಿಲ ಕೊಡವ ಸಮಾಜದ ನೇತೃತ್ವದಲ್ಲಿ ಫೆ.2ರಿಂದ 7ರವರೆಗೆ ಕೊಡವರ ಶಾಂತಿಯುತ ಪಾದಯಾತ್ರೆ ನಡೆಯಲಿದೆ ಎಂದು ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೊಡವ ಹಾಗೂ ಕೊಡವ ಭಾಷಿಕ ಸಮುದಾಯಗಳಿಗೆ ಸಂವಿಧಾನ ಬದ್ಧವಾಗಿ ದೊರಕಬೇಕಾದ, ಹಕ್ಕು ಮತ್ತು ಬೇಡಿಕೆಗೆ ಇದುವರೆಗೂ ಮನ್ನಣೆ ನೀಡದಿರುವುದು ವಿಪರ್ಯಾಸ. ಈ ಎಲ್ಲಾ ಅಂಶಗಳನ್ನು ಮುಂದಿಟ್ಟುಕೊಂಡು, ನಮ್ಮ ಸಂವಿಧಾನಿಕ ಹಕ್ಕು ಮತ್ತು ಸಂಸ್ಕೃತಿಯ ಭದ್ರತೆಗಾಗಿ, ಜನಾಂಗೀಯ ಅಸ್ತಿತ್ವವನ್ನು ಕಾಪಾಡುವ ನಿಟ್ಟಿನಲ್ಲಿ, ಎಲ್ಲಾ ಕೊಡವ ಸಮಾಜ, ಸಂಘಟನೆಗಳು, ಭಾಷಿಕ ಸಮುದಾಯಗಳ ಸಂಘಟನೆಗಳು, ಎಲ್ಲಾ ಕೊಡವ ಅಭಿಮಾನಿಗಳು ಅಖಿಲ ಕೊಡವ ಸಮಾಜದ ನೇತೃತ್ವದಲ್ಲಿ ಕುಟ್ಟ ದಿಂದ ಮಡಿಕೇರಿಗೆ ಬೃಹತ್ ಪಾದಯಾತ್ರೆ ನಡೆಸುವ ಮೂಲಕ ನಮ್ಮ ಹಕ್ಕು ಪ್ರತಿಪಾದನೆ ಮಾಡುವ ಕುರಿತಂತೆ ತೀರ್ಮಾನಿಸಿದ್ದೇವೆ ಎಂದರು.
PublicNext
30/01/2025 04:36 pm