ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಾಮರಾಜನಗರ : ನಿವೃತ್ತ ಸರಕಾರಿ ನೌಕರರಿಂದ ಪ್ರತಿಭಟನೆ

ಚಾಮರಾಜನಗರ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ನಿವೃತ್ತ ನೌಕರರ ವೇದಿಕೆ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ತಾಲೂಕು ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ದಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು.

ಏಳನೇ ವೇತನ ಆಯೋಗದ ವರದಿಯಂತೆ ಪರಿಸ್ಕೃತ ವೇತನದ ಮೇಲೆ ನಿವೃತ್ತಿ ಆರ್ಥಿಕ ಸೌಲಭ್ಯಗಳಾದ ಡಿಸಿಆರ್ಜಿ ಕಮ್ಯುಟೇಶನ್ ಹಾಗೂ ಗಳಿಕೆ ರಜೆ ನಗದೀಕರಣಗಳ ಸೌಲಭ್ಯಗಳ ಲೆಕ್ಕಾಚಾರದ ವ್ಯತ್ಯಾಸದ ಮೊತ್ತವನ್ನು ಕೊಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ತಾಲೂಕು ಸಂಚಾಲಕ ಹೆಚ್.ಮಹದೇವಯ್ಯ, ದುಂಡುಮಾದಯ್ಯ, ಶ್ರೀಕಂಠಸ್ವಾಮಿ, ನಾಗಯ್ಯ, ಬಸವಯ್ಯ, ಚಂದ್ರು, ವೀರಭದ್ರಸ್ವಾಮಿ, ನಾಗರಾಜು, ಎಂ.ಪಿ.ಸಿದ್ದಪ್ಪ, ರೇವಮ್ಮ, ರಾಜೇಶ್ವರಿ, ವಸಂತ, ಲಕ್ಷ್ಮಮ್ಮ, ಸಿದ್ದಪ್ಪ ಪ್ರಭುಸ್ವಾಮಿ ಸೇರಿದಂತೆ ಇತರರು ಇದ್ದರು.

Edited By : PublicNext Desk
Kshetra Samachara

Kshetra Samachara

30/01/2025 05:13 pm

Cinque Terre

420

Cinque Terre

0

ಸಂಬಂಧಿತ ಸುದ್ದಿ