ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೀದರ್ : ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ, ಸಂಚಾರಿ ನಿಯಮ ಪಾಲಿಸಲು ಜಾಗೃತಿ ಅಭಿಯಾನ

ಬೀದರ್ : ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ಸಂಚಾರಿ ನಿಯಮ ಪಾಲಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಹೇಳಿದರು .

ಇಂದು ನಗರದ ಅಂಬೇಡ್ಕರ್ ವೃತ್ತದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ನೇತೃತ್ವದಲ್ಲಿ ಹೆಲ್ಮೆಟ್ ಧರಿಸದೆ ಬೈಕ್ ಸವಾರಿ ಮಾಡುತ್ತಿರುವವರಿಗೆ ದಂಡ ಕಟ್ಟಿ, ಇಲ್ಲವಾದರೆ ಇಲ್ಲಿಂದಲೇ ಹೆಲ್ಮೆಟ್ ತೆಗೆದುಕೊಂಡು ಹೋಗಿ ಎನ್ನುವ ಅಭಿಯಾನ ನಡೆಸಲಾಯಿತು.

ಈ ಸಂದರ್ಭದಲ್ಲಿ ಎಸ್ಪಿ ಪ್ರದೀಪ್ ಗುಂಟಿ ಮಾತನಾಡಿ, ಜಿಲ್ಲೆಯ ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು 15 ದಿನದ ಹಿಂದೆ ಮಾಧ್ಯಮದ ಮೂಲಕ ನಾವು ತಿಳಿಸಿದ್ದೇವೆ. ಆದರೂ ಸಹ ಕೆಲವೊಬ್ಬರು ಹೆಲ್ಮೆಟ್ ಧರಿಸದೆ ಬೈಕ್ ಚಲಾಯಿಸುತ್ತಿದ್ದಾರೆ. ಇದನ್ನು ಗಮನಿಸಿ ಇಂದು ಹೆಲ್ಮೆಟ್ ಧರಿಸದ ಬೈಕ್ ಸವಾರರಿಗೆ ದಂಡ ಕಟ್ಟಿ, ಇಲ್ಲವಾದರೆ ಇಲ್ಲಿಂದಲೇ ಹೆಲ್ಮೆಟ್ ತೆಗೆದುಕೊಂಡು ಹೋಗಿ ಎನ್ನುವ ಅಭಿಯಾನ ಪ್ರಾರಂಭ ಮಾಡಿದ್ದೇವೆ. ಇದಕ್ಕೆ ಜನರು ಸ್ಪಂದನೆ ನೀಡುತ್ತಿದ್ದಾರೆ. ಸುಮಾರು ಜನ ಇಲ್ಲಿಂದಲೇ ಹೆಲ್ಮೆಟ್ ಖರೀದಿಸಿಕೊಂಡು ಹೋಗುತ್ತಿದ್ದಾರೆ. ಹೆಲ್ಮೆಟ್ ನಿಮ್ಮ ಸುರಕ್ಷತೆಗಾಗಿ ಇದೆ ಎಂದು ನಾವು ತಿಳಿಸುತ್ತಿದ್ದೇವೆ ಎಂದು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದರು.

Edited By : PublicNext Desk
PublicNext

PublicNext

30/01/2025 05:18 pm

Cinque Terre

11.09 K

Cinque Terre

0