ಮಡಿಕೇರಿ: ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಮೈಕ್ರೋ ಫೈನಾನ್ಸ್ ಮತ್ತು ಪಾನ್ ಬ್ರೋಕರ್ ಗಳ ಸಭೆ ಕರೆಯಲಾಗಿದ್ದು ಎಸ್ಪಿ ರಾಮರಾಜನ್ ಹಲವು ನಿರ್ದೇಶನಗಳನ್ನು ನೀಡಿದ್ರು.
ಸಭೆಯ ಬಳಿಕ ಮಾತನಾಡಿದ
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಒಬ್ಬರಿಗೆ ಒಂಬತ್ತು ಕಂಪೆನಿಗಳು ಸಾಲ ನೀಡಿರುವುದು ಕಂಡುಬಂದಿದೆ. ಸಾಲ ನೀಡುವಾಗ ದಾಖಲೆ ಪರಿಶೀಲಿಸಬೇಕು. ಅದನ್ನು ಬಿಟ್ಟು ದೌರ್ಜನ್ಯ ನಡೆಸಿದರೆ ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.
ಮೈಕ್ರೋ ಫೈನಾನ್ಸ್ ಕಂಪೆನಿಯ ಪ್ರತಿನಿಧಿಯೊಬ್ಬರು, ಸಾಲ ಪಡೆದವರು ಸಾಲ ವಾಪಸ್ಸು ನೀಡಲು ಮುಂದೆ ಬರುತ್ತಿಲ್ಲ. ನಮ್ಮ ಮೇಲೆಯೇ(ಫೈನಾನ್ಸ್ ಕಂಪೆನಿಗಳ ಮೇಲೆ) ದೌರ್ಜನ್ಯ ಮಾಡುತ್ತಿದ್ದಾರೆ. ಈ ಬಗ್ಗೆ ಗಮನ ಹರಿಸಬೇಕು ಎಂದು ಮನವಿ ಮಾಡಿದರು.
PublicNext
30/01/2025 05:37 pm