ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು : ವಿಧಾನ ಪರಿಷತ್ ಉಪಸಭಾಪತಿಗೆ ಬಿಗ್ ಶಾಕ್

ಚಿಕ್ಕಮಗಳೂರು : ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ಕಳೆದ ಮೂರು ವರ್ಷಗಳ ಹಿಂದೆ ಚುನಾವಣೆ ನಡೆದಿತ್ತು, ಇದರಲ್ಲಿ ಕೇವಲ ಆರು ಮತಗಳ ಅಂತರದಿಂದ ಬಿಜೆಪಿಯ ಎಂ.ಕೆ. ಪ್ರಾಣೇಶ್ ಜಯಗಳಿಸಿ ಉಪ ಸಭಾಪತಿ ಸ್ಥಾನ ಅಲಂಕರಿಸಿದ್ದರು ಕಾಂಗ್ರೆಸ್‌ನ ಗಾಯತ್ರಿ ಶಾಂತೇಗೌಡ 6 ಮತಗಳಿಂದ ಸೋಲು ಅನುಭವಿಸಿದ್ದರು. ಈ ಸಂಬಂಧ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಗಾಯತ್ರಿಯವರು ಚುನಾವಣಾ ತಕರಾರು ಸಲ್ಲಿಸಿದ್ದು ಇದು ಸುಪ್ರೀಂ ಕೋರ್ಟ್ ಅಂಗಳ ತಲುಪಿತ್ತು, ಆದರೆ ಸುಪ್ರೀಂ ಕೋರ್ಟ್ ಅರ್ಜಿಯನ್ನು ತಿರಸ್ಕರಿಸಿ ಯಾವ ನ್ಯಾಯಾಲಯದಲ್ಲಿ ತಕರಾರು ಅರ್ಜಿ ಸಲ್ಲಿಸಿದ್ದೀರಿ ಅಲ್ಲಿಯೇ ಬಗೆಹರಿಸಿಕೊಳ್ಳಿ ಎಂಬ ನಿರ್ದೇಶನದ ಮೇರೆಗೆ ಹೈಕೋರ್ಟ್‌ನಲ್ಲಿ ಸುದೀರ್ಘವಾದ ವಾದಗಳು ನಡೆದು ಜ. 30 ರಂದು ಹೈಕೋರ್ಟ್ ಮರು ಮತ ಏಣಿಕೆಗೆ ಆದೇಶ ನೀಡಿ ಮೂವತ್ತು ದಿನಗಳ ಒಳಗೆ ಮತ ಏಣಿಕೆ ಮಾಡುವಂತೆ ಆದೇಶ ಮಾಡಿದೆ.

Edited By : PublicNext Desk
PublicNext

PublicNext

30/01/2025 05:42 pm

Cinque Terre

6.38 K

Cinque Terre

0

ಸಂಬಂಧಿತ ಸುದ್ದಿ