ಮೈಸೂರು : ಮೈಸೂರಿನಲ್ಲಿ ಕುಡಿಯುವ ನೀರಿನ ಪೈಪ್ ಒಡೆದು ಅಪಾರ ಪ್ರಮಾಣದ ಕುಡಿಯುವ ನೀರು ಮಣ್ಣು ಪಾಲಾದ ಘಟನೆ ಮೈಸೂರು ಹುಣಸೂರು ರಸ್ತೆ ಪಡುವರಹಳ್ಳಿ ಜಂಕ್ಷನ್ನಲ್ಲಿ ನಡೆದಿದೆ.
ಕುಡಿಯುವ ನೀರು ಹೀಗೆ ಕಾರಂಜಿಯಂತೆ ಚಿಮ್ಮುತ್ತಿದ್ದು, ಮೈಸೂರು ಕೆಎಸ್ಓಯು ಸಮೀಪದ ರಸ್ತೆ ಮಧ್ಯ ಭಾಗದಲ್ಲಿ ಈ ಘಟನೆ ನಡೆದಿದೆ. ಸಾವಿರಾರು ಲೀಟರ್ ನೀರು ವ್ಯರ್ಥವಾಗಿದೆ. ಬೆಳಗ್ಗೆಯಿಂದ ನಿರಂತರವಾಗಿ ಕುಡಿಯುವ ನೀರು ವ್ಯರ್ಥವಾಗುತ್ತಿದ್ದು, ಸ್ಥಳೀಯರು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
Kshetra Samachara
30/01/2025 06:13 pm