ಕುಂದಗೋಳ : ಸಾರಿಗೆ ಬಸ್ ನಿಲ್ದಾಣದಲ್ಲಿ ಆರೋಗ್ಯ ಇಲಾಖೆ ಕೈಗೊಂಡ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಜನಜಾಗೃತಿ ಮತ್ತು ಬೀದಿ ನಾಟಕ ಪ್ರದರ್ಶನದ ಮೂಲಕ ಜನರಿಗೆ ಮಾಹಿತಿ ಬಿತ್ತಾರ ಮಾಡಿದರು.
ಹೌದು ! ಕುಂದಗೋಳ ಪಟ್ಟಣದ ಸಾರಿಗೆ ಬಸ್ ನಿಲ್ದಾಣದಲ್ಲಿ ಆರೋಗ್ಯ ಇಲಾಖೆ ನೇತೃತ್ವದಲ್ಲಿ ಕಲಾ ತಂಡಗಳು ವಿವಿಧ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ಬೀದಿ ನಾಟಕ, ಹಾಡು, ನೃತ್ಯ, ಸನ್ನಿವೇಶಗಳ ಜಾಗೃತಿ ಮಾಡಿದರು.
ಈ ಕಾರ್ಯಕ್ರಮವನ್ನು ಆರೋಗ್ಯಾಧಿಕಾರಿ ಡಾ.ಸೋಪಿಯಾ ದಾಸರಿ ಈ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳು, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ, ತಾಲೂಕ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳು. ಪ್ರಾಥಮಿಕ ಆರೋಗ್ಯ ಕೇಂದ್ರ ಯರಗುಪ್ಪಿ ಅಧಿಕಾರಿಗಳು ಮತ್ತು ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.
Kshetra Samachara
30/01/2025 06:35 pm