ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಮೈಕ್ರೋ ಫೈನಾನ್ಸ್‌ ತಡೆಗೆ ಸದ್ಯಕ್ಕಿಲ್ಲ ಸುಗ್ರೀವಾಜ್ಞೆ..! ಬಲಿಷ್ಠ ಕಾಯ್ದೆ ತರಲು ತಂಡ ರಚಿಸಿದ ಸರ್ಕಾರ

ಬೆಂಗಳೂರು: ಮೈಕ್ರೋ ಫೈನಾನ್ಸ್‌ ತಡೆಗೆ ಸುಗ್ರೀವಾಜ್ಞೆ ಮೂಲಕ ಲಗಾಮು ಹಾಕಲು ರಾಜ್ಯ ಸರ್ಕಾರ ನಿರ್ಧಾರಿಸಿತ್ತು. ಆದ್ರೆ ಕೆಲ ತಾಂತ್ರಿಕ ಸಮಸ್ಯೆ ಎದುರಾದ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆ ಜಾರಿಗೊಳಿಸುವ ಮುನ್ನ ಹಿರಿಯ ಅಧಿಕಾರಿಗಳ ತಂಡ ನೀಡುವ ವರದಿಯನ್ನಾಧರಿಸಿ ಸುಗ್ರೀವಾಜ್ಞೆ ಜಾರಿಗೊಳಿಸಲು ತೀರ್ಮಾನಿಸಲಾಗಿದೆ.

ಇಂದು ಸಿ.ಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲೂ ಮೈಕ್ರೋ ಫೈನಾನ್ಸ್ ಹಾವಳಿ ತಡೆಗೆ ಸುಗ್ರೀವಾಜ್ಞೆ ತರುವ ವಿಸ್ತೃತವಾಗಿ ಚರ್ಚೆ ನಡೆದಿದೆ. ಸುಗ್ರೀವಾಜ್ಞೆ ಜಾರಿಗೊಳಿಸುವ ಪರಮಾಧಿಕಾರ ಸಿಎಂ ಸಿದ್ದರಾಮಯ್ಯ ಸಂಪುಟ ಸಭೆ ನೀಡಿತ್ತು. ಅದ್ರಂತೆ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮೈಕ್ರೋ ಫೈನಾನ್ಸ್ ತಡಗೆ ಸುಗ್ರೀವಾಜ್ಞೆ ಜಾರಿಗೊಳಿಸುವ ಸಂಬಂಧ ಗೃಹ ಕಚೇರಿ ಕೃಷ್ಣಾದಲ್ಲಿ ಹಿರಿಯ ಅಧಿಕಾರಗಳ ಜೊತೆ ಉನ್ನತ ಮಟ್ಟದ ಸಭೆ ನಡೆಸಿದರು. ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ಕಿರುಕುಳ ತಪ್ಪಿಸುವ ಉದ್ದೇಶದಿಂದ ರಚಿಸಲಾಗಿರುವ ಸುಗ್ರೀವಾಜ್ಞೆಯಲ್ಲಿನ ಅಂಶಗಳನ್ನು ಮತ್ತೊಮ್ಮೆ ಪರಿಶೀಲಿಸಿ, ಬಲಿಷ್ಠ ಕಾಯ್ದೆಯನ್ನು ಆದಷ್ಟು ಬೇಗನೆ ಜಾರಿ ಮಾಡಲು ನಿರ್ಧರಿಸಲಾಗಿದೆ. ಈ ಕುರಿತು ಕಾನೂನು ಇಲಾಖೆ, ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಗಳ ತಂಡ ರಚನೆಗೆ ಸಭೆಯಲ್ಲಿ ನಿರ್ಧಾರಿಸಲಾಗಿದೆ.

ಹಿರಿಯ ಅಧಿಕಾರಿಗಳು ನೀಡುವ ವರದಿ ಮೇಲೆ ಶೀಘ್ರದಲ್ಲೇ ಬಲಿಷ್ಠ ಕಾಯ್ದೆ ತರಲು ಸಭೆಯಲ್ಲಿ ನಿರ್ಧಾರಿಸಲಾಗಿದೆ. ಈಗ ತರಲು ಹೊರಟಿದ್ದ ಸುಗ್ರೀವಾಜ್ಞೆಯಲ್ಲಿ ಕೆಲ ತಾಂತ್ರಿಕ ಸಮಸ್ಯೆ ಎದುರಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ನಿರ್ಧಾರ ತಗೆದುಕೊಂಡಿದೆ. ಇಂದಿನ ಸಭೆಯಲ್ಲಿ ಹಿರಿಯ ಅಧಿಕಾರಿಗಳು ಮತ್ತು ಕಾನೂನು ತಜ್ಞರ ಜೊತೆ ಸಮಾಲೋಚನೆ ನಡೆಸಿದ ಬಳಿಕ ಈ ನಿರ್ಧಾರ ಕೈಗೊಂಡಿದೆ.

ಕಾಯ್ದೆ ಸಂಪೂರ್ಣ ಸಂವಿಧಾನಬದ್ಧವಾಗಿದ್ದು, ಯಾವುದೇ ಲೋಪದೋಷಗಳನ್ನು ಹೊಂದಿರಬಾರದು.

ಸಾಲಗಾರರು ಎದುರಿಸುತ್ತಿರುವ ಕಿರುಕುಳವನ್ನು ತಪ್ಪಿಸಲು ಹಾಗೂ ಸಾಲ ನೀಡಿದವರು ಬಲವಂತದ ವಸೂಲಿ ಮಾಡುವುದನ್ನು ನಿಯಂತ್ರಿಸುವ ಉದ್ದೇಶದಿಂದ ಬಲಿಷ್ಠ ಕಾಯ್ದೆ ರಚಿಸಲು ಸಭೆಯಲ್ಲಿ ಸಿಎಂ ಸೂಚಿಸಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

30/01/2025 07:21 pm

Cinque Terre

176

Cinque Terre

0

ಸಂಬಂಧಿತ ಸುದ್ದಿ