ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ದೆಹಲಿಯಿಂದ ಇಬ್ಬರ ಮೃತದೇಹ ಆಗಮನ- ಮರಣೋತ್ತರ ಪರೀಕ್ಷೆಗೆ ರವಾನೆ

ಬೆಳಗಾವಿ: ಪ್ರಯಾಗ್ ರಾಜ್ ಮಹಾಕುಂಭ ಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಸಾವನ್ನಪ್ಪಿದ ನಾಲ್ವರ ಪೈಕಿ ಇಬ್ಬರ ಮೃತದೇಹಗಳನ್ನು ಬೆಳಗಾವಿ ಸಾಂಬ್ರಾ ವಿಮಾನ‌ ನಿಲ್ದಾಣಕ್ಕೆ ಗುರುವಾರ 6.20ಕ್ಕೆ ತರಲಾಯಿತು.

ದೆಹಲಿಯಿಂದ ವಿಮಾನದಲ್ಲಿ ನೇರವಾಗಿ ತರಲಾದ ಬೆಳಗಾವಿ ಶಿವಾಜಿ ನಗರದ ಮಹಾದೇವಿ ಬಾವನೂರ(48) ಹಾಗೂ ಶೆಟ್ಟಿ ಗಲ್ಲಿಯ ಅರುಣ ಕೋಪರ್ಡೆ(61) ಅವರ ಮೃತದೇಹಗಳನ್ನು ಜಿಲ್ಲಾಡಳಿತದಿಂದ ಬರಮಾಡಿಕೊಳ್ಳಲಾಯಿತು.

ಇದಕ್ಕೂ ಮೊದಲು‌ ನೆರೆದಿದ್ದ ಮೃತರ ಕುಟುಂಬಸ್ಥರ ಆಕ್ರಂದನ ಈ ವೇಳೆ ಹೇಳತೀರದಾಗಿತ್ತು.

ಮುಖ ನೋಡುತ್ತೇವೆ, ಮುಖ ತೋರಿಸುವಂತೆ ಅಲವತ್ತುಕೊಂಡರು. ಸರ್ಕಾರಿ ಪ್ರಕ್ರಿಯೆಗಳನ್ನು ಮುಗಿಸಿದ ಮೇಲೆ ದೇಹಗಳನ್ನು ತಮಗೆ ಹಸ್ತಾಂತರ ಮಾಡಲಾಗುವುದು ಎಂದು ಕುಟುಂಬಸ್ಥರಿಗೆ ಮನವರಿಕೆ ಮಾಡಿಕೊಟ್ಟರು‌.

ಆಗ ದುಃಖ ಉಮ್ಮಳಿಸಿ ಬಂದ ಕುಟುಂಬ ಸದಸ್ಯರು ಶವಗಳ ಪೆಟ್ಟಿಗೆ ಮೇಲೆ ಒರಗಿ ಕಣ್ಣೀರು ಹಾಕಿದರು. ಸ್ಥಳದಲ್ಲಿದ್ದ ಪೊಲೀಸರು ಅವರನ್ನು ಸಮಾಧಾನ ಪಡಿಸಿದರು‌. ಬಳಿಕ ಸಂಸದರಾದ ಜಗದೀಶ ಶೆಟ್ಟರ್, ಪ್ರಿಯಾಂಕಾ ಜಾರಕಿಹೊಳಿ, ಶಾಸಕರಾದ ಅಭಯ್ ಪಾಟೀಲ, ಆಸೀಫ್ ಸೇಠ್, ಮಾಜಿ ಶಾಸಕ ಅನಿಲ ಬೆನಕೆ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ ಅವರು ಪುಷ್ಪನಮನ ಸಲ್ಲಿಸಿದರು.

ದೇಹಗಳನ್ನು ಎರಡು ಪ್ರತ್ಯೇಕ ಆಂಬ್ಯುಲೆನ್ಸ್ ನಲ್ಲಿ ಹಾಕಿ ಜಿಲ್ಲಾಸ್ಪತ್ರೆ ಶವಾಗಾರಕ್ಕೆ ಮರಣೋತ್ತರ ಪರೀಕ್ಷೆಗೆ ಸಾಗಿಸಲಾಯಿತು.

Edited By : Manjunath H D
PublicNext

PublicNext

30/01/2025 07:59 pm

Cinque Terre

17.98 K

Cinque Terre

3

ಸಂಬಂಧಿತ ಸುದ್ದಿ