ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದೆಲ್ಲೆಡೆ ನಾಮಫಲಕದಲ್ಲಿ‌ ಶೇ.60ರಷ್ಟು ಕನ್ನಡ ಅಳವಡಿಕೆಗೆ ಸಚಿವ ಶಿವರಾಜ್ ತಂಗಡಗಿ ಸೂಚನೆ

ಬೆಂಗಳೂರು: ಕರ್ನಾಟಕ ರಾಜ್ಯಾದ್ಯಂತ ಎಲ್ಲಾ ವ್ಯಾಪಾರ ಉದ್ದಿಮೆ, ಶಿಕ್ಷಣ ಸಂಸ್ಥೆ, ಅಂಗಡಿ ಮುಂಗಟ್ಟುಗಳ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಅಳವಡಿಕೆ‌ ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸಚಿವ‌ ಶಿವರಾಜ್ ತಂಗಡಗಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಸಚಿವರು ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕೈಗಾರಿಕೆ ಇಲಾಖೆ,‌ ಗೃಹ ಇಲಾಖೆ ಹಾಗೂ ಕಾನೂನು, ಶಾಲಾ ಶಿಕ್ಷಣ, ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಗಳ ಜತೆ ಸಭೆ ನಡೆಸಿ ಈ ಸೂಚನೆ ನೀಡಿದ್ದಾರೆ.

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ ವನ್ನು ಸಮರ್ಪಕ ಅನುಷ್ಠಾನ ಆಗಲೇ ಬೇಕು. ಕೆಲವೆಡೆ ನಾಮಫಲಕದಲ್ಲಿ ಶೇ. 60ರಷ್ಟು ಕನ್ನಡ ಬಳಕೆ ಆಗಿಲ್ಲ. ಪ್ರಮುಖವಾಗಿ ಸ್ಥಳೀಯ ಅನುಷ್ಠಾನ ಆಡಳಿತದೊಂದಿಗೆ ಪೊಲೀಸರನ್ನೊಳಗೊಂಡ ಟಾಸ್ಕ್ ಫೋರ್ಸ್‌ ರಚನೆ, ಬಿಬಿಎಂಪಿ ವಲಯಗಳಲ್ಲಿ ಜಾಗೃತ ವಾಹನಗಳ ಬಳಕೆ, ರಾಜ್ಯಾದ್ಯಂತ ಸಾರ್ವಜನಿಕರಲ್ಲಿ ನಾಮ ಫಲಕದಲ್ಲಿ ಶೇ.60ರಷ್ಟು ಕನ್ನಡ ಬಳಕೆ ಬಗ್ಗೆ ಜಾಗೃತಿ ಮೂಡಿಸಬೇಕು. ವಿಧೇಯಕ ಪರಿಣಾಮಕಾರಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯತಿ ಮಟ್ಟದಲ್ಲಿ ಜಾಗೃತಿ ಮೂಡಿಸಬೇಕು ಎಂದು ಸೂಚನೆ ನೀಡಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

30/01/2025 08:07 pm

Cinque Terre

356

Cinque Terre

0

ಸಂಬಂಧಿತ ಸುದ್ದಿ