ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚನ್ನಮ್ಮನ ಕಿತ್ತೂರು : ರೈತರ ಹೋರಾಟಕ್ಕೆ ಶೀಘ್ರ ಜಯ - ಎಂ. ಎಫ್. ಜಕಾತಿ

ಚನ್ನಮ್ಮನ ಕಿತ್ತೂರು : ಕುಲವಳ್ಳಿ ಸೇರಿ ಒಂಬತ್ತು ಹಳ್ಳಿಗಳ ರೈತರು ಸಾಗುವಳಿ ಭೂಮಿಯ ಹಕ್ಕಿಗಾಗಿ ಅನಿರ್ದಿಷ್ಟ ಅಹೋರಾತ್ರಿ ಹೋರಾಟಕ್ಕೆ ಶೀಘ್ರ ನ್ಯಾಯ ಸಿಗಲಿದೆ’ ಎಂದು ಪಟ್ಟಣ ಪಂಚಾಯಿತಿ ಸದಸ್ಯ ಎಂ. ಎಫ್. ಜಕಾತಿ ಹೇಳಿದರು.

ಇಲ್ಲಿನ ತಹಶೀಲ್ದಾರ್ ಕಚೇರಿ ಎದುರು ನಡೆದ 18 ನೇ ದಿನದ ರೈತರ ಹೋರಾಟದಲ್ಲಿ ಗುರುವಾರ ಭಾಗವಹಿಸಿದ ಅವರು ಮಾತನಾಡಿ, ಕೆಲವು ದಿನಗಳ ಹಿಂದೆ ಶಾಸಕ ಬಾಬಾಸಾಹೇಬ ಪಾಟೀಲ ಅವರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ರೈತರಿಗೆ ನ್ಯಾಯ ದೊರಕಿಸಿ ಕೊಡುತ್ತೇನೆ ಎಂದು ಭರವಸೆ ನೀಡಿದ್ದರು. ಕೊಟ್ಟ ಮಾತಿನಂತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ಹಿರಿಯ ಅಧಿಕಾರಿಗಳ ಜತೆ ಸಾಗುವಳಿ ಭೂಮಿಯ ಬಗ್ಗೆ ಚರ್ಚೆ ನಡೆಸಿ ಪರಿಹಾರ ಮಾರ್ಗವನ್ನು ಕಂಡು ಹಿಡಿಯುವ ಪ್ರಯತ್ನ ಮಾಡಿದ್ದಾರೆ’ ಎಂದರು.

‘ಸಚಿವರು ಹಾಗೂ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು ಬೆಳಗಾವಿ ಜಿಲ್ಲಾಧಿಕಾರಿಗಳ ಜತೆ ಚರ್ಚೆ ನಡೆಸಿದರು. ಒಂಬತ್ತು ಊರುಗಳ ಭೂಮಿಯಲ್ಲಿ ಕೃಷಿ ಮಾಡುತ್ತಿರುವ ರೈತರ ಸಮೀಕ್ಷೆಯಲ್ಲಿ ಈಗಾಗಲೇ ಸರ್ಕಾರ ಮಾಡಿದೆ. ಅದರ ಪ್ರಕಾರ ಪಹಣಿ ಪತ್ರಿಕೆಯ ಕಾಲಮ್ಮಿನಲ್ಲಿ ಹೆಸರು ನೋಂದಾಯಿಸಲು ಸಮಸ್ಯೆಯಿಲ್ಲವೆಂದು ಜಿಲ್ಲಾಧಿಕಾರಿ ಅವರಿಗೆ ಇಲಾಖೆ ಹಿರಿಯ ಅಧಿಕಾರಿಗಳು ಸೂಚಿಸಿದ್ದಾರೆ. ಶೀಘ್ರ ಈ ಬಗ್ಗೆ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಅವರು ಭರವಸೆ ನೀಡಿದ್ದಾರೆ’ ಎಂದು ತಿಳಿಸಿದರು.

Edited By : PublicNext Desk
PublicNext

PublicNext

30/01/2025 08:13 pm

Cinque Terre

11.93 K

Cinque Terre

0

ಸಂಬಂಧಿತ ಸುದ್ದಿ