ಬೆಂಗಳೂರು: ಮಹಾತ್ಮ ಗಾಂಧೀಜಿ ಅವರನ್ನು ವಿರೋಧಿಗಳು ಗುಂಡಿಟ್ಟು ಕೊಂದಿರಬಹುದು. ಆದರೆ, ಅವರ ಆದರ್ಶ ಮೌಲ್ಯಗಳನ್ನು ನಾಶ ಮಾಡಲು ಸಾಧ್ಯವಿಲ್ಲ. ಎಲ್ಲಿಯವರೆಗೆ ಅಸಮಾನತೆ, ಜಾತಿ ತಾರತಮ್ಯ, ಬಂಡವಾಳಶಾಹಿತ್ವ ಇರುತ್ತದೆಯೋ ಅಲ್ಲಿಯವರೆಗೂ ಗಾಂಧಿ ವಿಚಾರಗಳು ಭಾರತ ದೇಶದಲ್ಲಿ ಪ್ರಸ್ತುತ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಗಾಂಧಿ ಹುತಾತ್ಮ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾವು ಗಾಂಧೀಜಿ ಅವರಿಗೆ ನಿಜವಾಗಿಯೂ ಗೌರವ ಸಲ್ಲಿಸುವುದು ಅಂದರೆ ಅವರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡ ಮೌಲ್ಯಗಳನ್ನು ನಾವುಗಳು ಪಾಲಿಸಿದಾಗ ಮಾತ್ರ ಅವರಿಗೆ ಕೊಡುವ ಗೌರವ.
ಗಾಂಧೀಜಿಯವರು ಸತ್ಯ, ಅಹಿಂಸೆ, ಸತ್ಯಾಗ್ರಹದ ಮೂಲಕ ಸ್ವಾತಂತ್ರ್ಯ ತಂದುಕೊಟ್ಟರು. ಅವರ ತತ್ವ ಪಾಲಿಸುತ್ತಾ ಸಮಾಜ ಕಟ್ಟುವ ಕೆಲಸ ಮಾಡಿದಾಗ ಮಾತ್ರ ಗಾಂಧೀಜಿಗೆ ನಿಜವಾದ ಗೌರವ ನೀಡಿದಂತೆ ಎಂದರು.
PublicNext
30/01/2025 08:27 pm