", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/387839-1738249792-Untitled-design---2025-01-30T203948.222.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Shashikumar Hassan" }, "editor": { "@type": "Person", "name": "abhishek.kamoji" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಅರಸೀಕೆರೆ : ಐಚರ್ ಕ್ಯಾಂಟರ್ ಹಾಗೂ ಡಿಸೇಲ್ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಾಲಕ...Read more" } ", "keywords": "Hassan: Eicher - diesel tanker head-on collision - death on the spot,Hassan,Accident", "url": "https://publicnext.com/node" }
ಅರಸೀಕೆರೆ : ಐಚರ್ ಕ್ಯಾಂಟರ್ ಹಾಗೂ ಡಿಸೇಲ್ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಾಲಕ ಸೇರಿ ಐವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಅರಸೀಕೆರೆ ತಾಲ್ಲೂಕಿನ, ನಾಗರಹಳ್ಳಿ ಕಟ್ಟೆ ಬಳಿ ನಡೆದಿದೆ. ಬಿಹಾರ ಮೂಲದ ಸಾವಾಜ್ (25) ಮೃತ ಯುವಕ,
ತಿಪಟೂರು ಕಡೆಯಿಂದ ಬರುತ್ತಿದ್ದ KA-13 Q-1344 ನಂಬರ್‌ನ ಡಿಸೇಲ್ ಟ್ಯಾಂಕರ್ ಹಾಗೂ
ಮೆಕ್ಕೆಜೋಳ ಲೋಡ್ ಮಾಡಿಕೊಂಡು ಅರಸೀಕೆರೆ ಕಡೆಗೆ ತೆರಳುತ್ತಿದ್ದ ಐಚರ್ ವಾಹನ ನಡುವೆ ಡಿಕ್ಕಿ ಸಂಭವಿಸಿದೆ.
ಕ್ಯಾಂಟರ್‌ನಲ್ಲಿ ಬಿಹಾರ ಮೂಲದ ನಾಲ್ವರು ಕಾರ್ಮಿಕರು ತೆರಳುತ್ತಿದ್ದರು. ಅಪಘಾತದ ರಭಸಕ್ಕೆ ಮೃತನ ರುಂಡ, ಮುಂಡ ಬೇರ್ಪಟ್ಟಿದೆ. ಚಾಲಕ ಸೇರಿದಂತೆ ನಾಲ್ವರ ಸ್ಥಿತಿ ಗಂಭೀರವಾಗಿದೆ.
ಗಾಯಾಳುಗಳಿಗೆ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ನಂತರ ಡಿಸೇಲ್ ಟ್ಯಾಂಕರ್ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಗಂಡಸಿ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
PublicNext
30/01/2025 08:40 pm