ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಳಸ: ಆಟೋ ರಿಕ್ಷಾಗೆ ಕಾರ್ ಹಿಟ್ ಅಂಡ್ ರನ್ - ಶಾಲಾ ಮಕ್ಕಳು ಸೇರಿ ನಾಲ್ವರಿಗೆ ಗಂಭೀರ ಗಾಯ

ಕಳಸ : ಶಾಲಾ ಮಕ್ಕಳನ್ನು ಮನೆಗೆ ಕರೆದೊಯ್ಯುತ್ತಿದ್ದ ಆಟೋಗೆ ಕಾರೊಂದು ಡಿಕ್ಕಿ ಹೊಡೆದು ನಿಲ್ಲಿಸದೇ ಎಸ್ಕೇಪ್ ಆಗಿದೆ. ಈ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹಿರೇಬೈಲಿನಲ್ಲಿ ನಡೆದಿದೆ.

ಡಿಕ್ಕಿಯ ರಭಸಕ್ಕೆ ಆಟೋ ಪಲ್ಟಿಯಾಗಿದ್ದು ಆಟೋದಲ್ಲಿದ್ದ ಚಾಲಕ ಸೇರಿದಂತೆ ನಾಲ್ವರು ಮಕ್ಕಳಿಗೆ ಗಂಭೀರ ಗಾಯಗಳಾಗಿವೆ. ಅಪಘಾತದ ಬಳಿಕ ಎಸ್ಕೇಪ್ ಆಗಿತ್ತಿದ್ದ ಕಾರು ಚಾಲಕನ ಕುರಿತು ಕಳಸದ ಸ್ಥಳೀಯರಿಗೆ ಮಾಹಿತಿ ನೀಡಿದ್ದರಿಂದ ಕಾರ್ ಚಾಲಕನನ್ನು ಕಳಸದಲ್ಲಿ ಸ್ಥಳೀಯರು ವಶಕ್ಕೆ ಪಡೆದಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಆಟೋ ಚಾಲಕನನ್ನು ಕಳಸ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲಾಗಿದ್ದು ಕಳಸ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Edited By : Manjunath H D
PublicNext

PublicNext

30/01/2025 10:21 pm

Cinque Terre

32.46 K

Cinque Terre

0