", "articleSection": "Crime", "image": { "@type": "ImageObject", "url": "https://prod.cdn.publicnext.com/s3fs-public/40083620250131085627filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "VeereshChikkamangaluru" }, "editor": { "@type": "Person", "name": "9731141698" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಶಿವಮೊಗ್ಗ : ಕಲ್ಯಾಣ ಮಂಟಪವೊಂದರಲ್ಲಿ ಮಹಿಳೆಯರ ಕೊಠಡಿಗೆ ನುಗ್ಗಿದ ಕಳ್ಳರು ಸೂಟ್ಕೇಸ್ ನಲ್ಲಿದ್ದ 4.70 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ...Read more" } ", "keywords": "Node,Shimoga,Crime", "url": "https://publicnext.com/node" }
ಶಿವಮೊಗ್ಗ : ಕಲ್ಯಾಣ ಮಂಟಪವೊಂದರಲ್ಲಿ ಮಹಿಳೆಯರ ಕೊಠಡಿಗೆ ನುಗ್ಗಿದ ಕಳ್ಳರು ಸೂಟ್ಕೇಸ್ ನಲ್ಲಿದ್ದ 4.70 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ನಗರದ ಎನ್.ಟಿ.ರಸ್ತೆಯ ಫಲಕ್ ಪ್ಯಾಲೇಸ್ನಲ್ಲಿ ಘಟನೆ ಸಂಭವಿಸಿದೆ.
ಉದ್ಯಮಿ ನವೀದ್ ನವಾಜ್ ಎಂಬುವವರು ಪತ್ನಿ ಮತ್ತು ಸಹೋದರಿಯೊಂದಿಗೆ ಸಂಬಂಧಿಯ ಮದುವೆಯಲ್ಲಿ ಭಾಗವಹಿಸಿದ್ದರು. ಮಹಿಳೆಯ ಡ್ರೆಸ್ಸಿಂಗ್ ರೂಮ್ನಲ್ಲಿ ಸೂಟ್ ಕೇಸ್ ಇರಿಸಿದ್ದರು. ಜಿಪ್ಗಳಿಗೆ ಲಾಕ್ ಮಾಡಲಾಗಿತ್ತು.
ದುಲ್ವಾ ಕಾರ್ಯಕ್ರಮ ಇದ್ದಿದ್ದರಿಂದ ಕುಟುಂಬದವರು ಅದರಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮ ಮುಗಿಸಿ ಮರಳಿದಾಗ ಸೂಟ್ಕೇಸ್ನ ಜಿಪ್ ಹರಿದಿರುವುದು ಗಮನಕ್ಕೆ ಬಂದಿದೆ. ಪರಿಶೀಲಿಸಿದಾಗ 113 ಗ್ರಾಂ ತೂಕದ ಚಿನ್ನಾಭರಣ ನಾಪತ್ತೆಯಾಗಿತ್ತು ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Kshetra Samachara
31/01/2025 08:56 am