ಶಿವಮೊಗ್ಗ: ಉನ್ನತ ಶಿಕ್ಷಣ ಸಚಿವರ ನಿರ್ಲಕ್ಷ್ಯ, ಕುಲಪತಿ, ಕುಲಸಚಿವರ ದರ್ಪ ಗಮನಿಸಿದರೆ ಕುವೆಂಪು ವಿಶ್ವವಿದ್ಯಾಲಯವನ್ನು ಮುಚ್ಚುವ ಹುನ್ನಾರ ನಡೆದಿದೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್ ಅರುಣ್ ಅನುಮಾನ ವ್ಯಕ್ತಪಡಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಎಸ್.ಅರುಣ್, ಕುವೆಂಪು ವಿಶ್ವವಿದ್ಯಾಲಯ ಆಡಳಿತ ವೈಫಲ್ಯದ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದರು. ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವಕ್ಕೆ ಸಹ ಕುಲಾಧಿಪತಿ ಮತ್ತು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ಗೈರಾಗಿದ್ದಾರೆ. ಸಚಿವರ ಸಮಯ ಕೇಳಿಯೇ ಘಟಿಕೋತ್ಸವದ ದಿನಾಂಕ ನಿಗದಿ ಮಾಡಲಾಗಿತ್ತು. ಆದರೂ ಸಚಿವರು ಗೈರಾಗಲು ಕಾರಣವೇನು ಎಂಬುದನ್ನು ಬಹಿರಂಗಪಡಿಸಬೇಕು. ರಾಜ್ಯಪಾಲರು ಘಟಿಕೋತ್ಸವಕ್ಕೆ ಬಂದಿದ್ದಕ್ಕೆ ಉನ್ನತ ಶಿಕ್ಷಣ ಸಚಿವರು ಗೈರಾಗಿರುವ ಅನುಮಾನವಿದೆ ಎಂದು ಅರುಣ್ ಆರೋಪಿಸಿದರು.
ರಾಜ್ಯದ ಮುತ್ಸದ್ಧಿ ರಾಜಕಾರಣಿ, ಅವರದ್ದೇ ಪಕ್ಷದ ನಾಯಕ ಕಾಗೋಡು ತಿಮ್ಮಪ್ಪ ಅವರಿಗೆ ಕುವೆಂಪು ವಿಶ್ವವಿದ್ಯಾಲಯ ಮತ್ತು ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದಲ್ಲಿ ಒಂದೇ ದಿನ ಗೌರವ ಡಾಕ್ಟರೇಟ್ ನೀಡಲಾಯಿತು. ಅದು ಮಹತ್ವದ ದಿನ. ಆದರೆ ಉನ್ನತ ಶಿಕ್ಷಣ ಸಚಿವರು ಮತ್ತು ಕೃಷಿ ಸಚಿವರು ಘಟಿಕೋತ್ಸವಕ್ಕೆ ಗೈರಾಗಿದ್ದಾರೆ. ಇದಕ್ಕೆ ಕಾರಣ ತಿಳಿಸಬೇಕು.
PublicNext
31/01/2025 10:08 am