ಹುಬ್ಬಳ್ಳಿ: ಬಸ್ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ ನಿರ್ವಹಣೆಯ ಬಗ್ಗೆ, ನೌಕರರು ಹಾಗೂ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ, ಸಾರಿಗೆ ಸಂಸ್ಥೆಯ ಸಿಬ್ಬಂದಿ ಗೋಕುಲ ರಸ್ತೆಯ ಹೊಸ ಬಸ್ ನಿಲ್ದಾಣದಲ್ಲಿ ಸ್ವಯಂಪ್ರೇರಿತವಾಗಿ ಸ್ವಚ್ಛತಾ ಕಾರ್ಯ ಮಾಡಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು.
ನಗರದ ಗೋಕುಲ ರಸ್ತೆ ಬಸ್ ನಿಲ್ದಾಣಕ್ಕೆ ಪ್ರತಿದಿನ ಒಂದು ಸಾವಿರಕ್ಕೂ ಹೆಚ್ಚು ಬಸ್ಸುಗಳು ಬಂದು ಹೋಗುತ್ತವೆ. ನಿತ್ಯ ಅಂದಾಜು 25 ರಿಂದ 30 ಸಾವಿರ ಜನರು ಬಸ್ ನಿಲ್ದಾಣಕ್ಕೆ ಭೇಟಿ ನೀಡುತ್ತಾರೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ, ಸಾರಿಗೆ ಸಂಸ್ಥೆಯ ಸಿಬ್ಬಂದಿ ಸ್ವಯಂ ಪ್ರೇರಿತ ಸ್ವಚ್ಛತಾ ಕಾರ್ಯ ಮಾಡಿದರು. ನಿತ್ಯ ಬಸ್ ಓಡಿಸುವ ಚಾಲಕರು, ಟಿಕೆಟ್ ನೀಡುವ ನಿರ್ವಾಹಕರು, ನಿಲ್ದಾಣದ ಸಾರಿಗೆ ನಿಯಂತ್ರಕರು, ಡಿಪೋದಲ್ಲಿ ಬಸ್ ನಿರ್ವಹಣೆ ಮಾಡುವ ತಾಂತ್ರಿಕ ಸಿಬ್ಬಂದಿ, ಆಡಳಿತ ಸಿಬ್ಬಂದಿ, ಡಿಪೋ ಮ್ಯಾನೇಜರ್ ದೀಪಕ್ ಜಾಧವ, ನಿಲ್ದಾಣಾಧಿಕಾರಿ ವಿ.ಎಸ್.ಹಂಚಾಟೆ ಮತ್ತಿತರ ಅಧಿಕಾರಿಗಳು ಸೇರಿದಂತೆ, ಸುಮಾರು 30ಕ್ಕೂ ಹೆಚ್ಚು ನೌಕರರು ಆಸಕ್ತಿಯಿಂದ ಭಾಗವಹಿಸಿ ಸ್ವಚ್ಚತೆ ಮಾಡಿದರು.
ಬಸ್ ನಿಲ್ದಾಣದ ವಿವಿಧ ಭಾಗಗಳಲ್ಲಿದ್ದ ಗಿಡಗಂಟಿಗಳು, ಕಸವನ್ನು ತೆಗೆದು ಸ್ವಚ್ಚಗೊಳಿಸಿದರು. ರಾತ್ರಿ ವೇಳೆ ಮಹಿಳೆಯರು, ಮಕ್ಕಳು ಸೇರಿದಂತೆ ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಹೆಚ್ಚಿನ ಬೆಳಕಿನ ವ್ಯವಸ್ಥೆಗೆ ಮಾಡಿದರು. ಇನ್ಮುಂದಾದ್ರು ಸಾರ್ವಜನಿಕರು ಬಸ್ ನಿಲ್ದಾಣಗಳನ್ನು ಸ್ವಚ್ಚಂದವಾಗಿ ಇಟ್ಟುಕೊಳ್ಳಿ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
31/01/2025 02:56 pm