", "articleSection": "Public News", "image": { "@type": "ImageObject", "url": "https://prod.cdn.publicnext.com/s3fs-public/39640520250131033730filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SundarChamarajnagar" }, "editor": { "@type": "Person", "name": "112068327297121593490" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಾಮರಾಜನಗರ : ಶಿಲ್ಪಕಲೆಗೆ ಜೀವತುಂಬಿದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಅವರು ಇಂದಿಗೂ ಚಿರಸ್ಮರಣೀಯರಾಗಿದ್ದಾರೆ ಎಂದು ಎಂ.ಎಸ್.ಐ.ಎಲ್ ಅಧ್ಯಕ್ಷ...Read more" } ", "keywords": "Node,Chamarajnagar,Public-News", "url": "https://publicnext.com/node" } ಚಾಮರಾಜನಗರ : ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಚಿರಸ್ಮರಣೀಯರು
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಾಮರಾಜನಗರ : ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಚಿರಸ್ಮರಣೀಯರು

ಚಾಮರಾಜನಗರ : ಶಿಲ್ಪಕಲೆಗೆ ಜೀವತುಂಬಿದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಅವರು ಇಂದಿಗೂ ಚಿರಸ್ಮರಣೀಯರಾಗಿದ್ದಾರೆ ಎಂದು ಎಂ.ಎಸ್.ಐ.ಎಲ್ ಅಧ್ಯಕ್ಷ ಹಾಗೂ ಶಾಸಕ ಸಿ. ಪುಟ್ಟರಂಗಶೆಟ್ಟಿ ತಿಳಿಸಿದರು.

ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಡಾ. ರಾಜ್ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಸರಳವಾಗಿ ಆಯೋಜಿಸಲಾಗಿದ್ದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಅವರ ಸಂಸ್ಮರಣಾ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಅವರು ಶಿಲ್ಪಕಲೆಗೆ ಅಪಾರ ಕೊಡುಗೆ ನೀಡಿದ್ದಾರೆ. ವಿಶೇಷವಾಗಿ ಸುಂದರ ದೇವಾಲಯಗಳನ್ನು ನಿರ್ಮಿಸುವ ಮೂಲಕ ಶಿಲೆಗಳಿಗೆ ಜೀವ ತುಂಬುವ ಕೆಲಸ ಮಾಡಿದ್ದಾರೆ. ಶಿಲ್ಪಕಲೆಗಳಲ್ಲಿನ ಕೆತ್ತನೆಗಳು ಈಗಲೂ ಜನರ ಮನಸೂರೆಗೊಂಡಿವೆ. ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಅವರ ತ್ಯಾಗ, ಆದರ್ಶ ಗುಣಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕಾಗಿದೆ ಎಂದರು.

ಕರ್ನಾಟಕವನ್ನು ಆಳಿದ ಚಾಲುಕ್ಯ, ಹೊಯ್ಸಳ ಅರಸರು ಸಹ ಶಿಲ್ಪಕಲೆಯನ್ನು ಪ್ರೋತ್ಸಾಹಿಸಿದ್ದರು. ರಾಜ್ಯದ ಪ್ರಮುಖ ಐತಿಹಾಸಿಕ ತಾಣಗಳಾದ ಬೇಲೂರು, ಹಳೇಬೀಡು, ಪಟ್ಟದಕಲ್ಲುಗಳಲ್ಲಿನ ದೇವಾಲಯಗಳಲ್ಲಿ ಶಿಲ್ಪಕಲೆಯ ಸುಂದರ ಕೆತ್ತನೆಗಳನ್ನು ಕಾಣಬಹುದು. ಆ ಮೂಲಕ ತಮ್ಮ ಜೀವಂತಿಕೆಯನ್ನು ಉಳಿಸಿಕೊಂಡಿರುವ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಅವರು ಎಂದೆಂದಿಗೂ ಸ್ಮರಣೀಯರಾಗಿದ್ದಾರೆ ಎಂದು ತಿಳಿಸಿದರು.

Edited By : PublicNext Desk
Kshetra Samachara

Kshetra Samachara

31/01/2025 03:35 pm

Cinque Terre

2.62 K

Cinque Terre

0