", "articleSection": "Public News", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/396405_1738321077_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SundarChamarajnagar" }, "editor": { "@type": "Person", "name": "112068327297121593490" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಾಮರಾಜನಗರ : ಜಿಲ್ಲಾ ಕೇಂದ್ರದಲ್ಲಿ ಸಚಿವ ಸಂಪುಟ ಸಭೆ ನಡೆಸದೆ, ಜಿಲ್ಲೆಯ ಮಲೆ ಮಹದೇಶ್ವರಬೆಟ್ಟದಲ್ಲಿ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರ...Read more" } ", "keywords": "Node,Chamarajnagar,Public-News", "url": "https://publicnext.com/node" }
ಚಾಮರಾಜನಗರ : ಜಿಲ್ಲಾ ಕೇಂದ್ರದಲ್ಲಿ ಸಚಿವ ಸಂಪುಟ ಸಭೆ ನಡೆಸದೆ, ಜಿಲ್ಲೆಯ ಮಲೆ ಮಹದೇಶ್ವರಬೆಟ್ಟದಲ್ಲಿ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ, ಸಚಿವ ಸಂಪುಟ ಸಭೆ ನಡೆಯುವ ದಿನದಂದೆ ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರುಸೇನೆ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಕಪ್ಪುಪಟ್ಟಿ ಧರಿಸಿ, ಕಪ್ಪು ಬಾವುಟ ಹಿಡಿದು ಕರಾಳ ದಿನವನ್ನು ಆಚರಿಸುತ್ತೇವೆ ಎಂದು ಸಂಘದ ರಾಜ್ಯ ಉಪಾಧ್ಯಕ್ಷ ಡಾ.ಗುರುಪ್ರಸಾದ್ ಹೇಳಿದರು
ಸಚಿವ ಸಂಪುಟ ಸಭೆ ಸಂಬಂದ ಪೂರ್ವಭಾವಿಯಾಗಿ ವಿಧಾನಸೌಧದ ಕಾರ್ಯದರ್ಶಿ ಅಥವಾ ಜಿಲ್ಲಾಡಳಿತ ರೈತರನ್ನು ಕರೆದು, ಸಭೆ ನಡೆಸಿ, ಅಲ್ಲಿ ರೈತರ ಸಮಸ್ಯೆಗಳನ್ನು ಪಟ್ಟಿಮಾಡಿ, ಸರ್ಕಾರಕ್ಕೆ ನೀಡಿ, ವ್ಯವಸ್ಥಿತವಾಗಿ ಸಚಿವ ಸಂಪುಟವನ್ನು ನಡೆಸಬೇಕಿತ್ತು. ಆದರೆ ರೈತರ ಸಮಸ್ಯೆಗಳನ್ನು ಕಡೆಗಣಿಸಿ ಕಾಟಾಚಾರಕ್ಕೆ ಸಚಿವಸಂಪುಟ ಸಭೆಯನ್ನು ನಡೆಸಲಾಗುತ್ತಿದೆ. ಮಲೆ ಮಹದೇಶ್ವರಬೆಟ್ಟದಲ್ಲಿ ಸಚಿವ ಸಂಪುಟ ಸಭೆಯನ್ನು ನಡೆಸುವುದರಿಂದ ಚಾಮರಾಜನಗರಕ್ಕೆ ಯಾವ ಕೊಡುಗೆಯನ್ನು ನೀಡಲಾಗುತ್ತದೆ ಎಂಬುದನ್ನು ಮುಖ್ಯಮಂತ್ರಿಯವರು ಮೊದಲು ಸ್ಪಷ್ಟಪಡಿಸಬೇಕು ಎಂದು ಅವರು ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದ್ದರು.
ಜಿಲ್ಲೆಯ ಪ್ರಮುಖ ಬೇಡಿಕೆಯಾದ ಯುಎನ್ಐಪಿ ಸ್ಕೀಮನ್ನು ಮರು ಸ್ಥಾಪಿಸಿ, ಜಿಲ್ಲೆಯ ರೈತರಿಗೆ ಸಬ್ಸಿಡಿ ದರದಲ್ಲಿ ವಿದ್ಯುತ್ ಟ್ರಾನ್ಸ್ಫರ್ ಗಳನ್ನು ನೀಡುವ ನಿರ್ಣಯವನ್ನು ಸಚಿವ ಸಂಪುಟದಲ್ಲಿ ಕೈಗೊಳ್ಳಬೇಕು. ನಾಲ್ಕು ಅರಣ್ಯ ವಿಭಾಗಗಳಿಂದ ಸುತ್ತುವರಿದಿರುವ ಜಿಲ್ಲೆಯಲ್ಲಿ ಕಾಡುಪ್ರಾಣಿಗಳ ಹಾವಳಿಯಿಂದ ತತ್ತರಿಸಿರುವ ರೈತರಿಗೆ ಸೂಕ್ತ ಬೆಳೆ ಪರಿಹಾರ ನೀಡಬೇಕು. ಬರಪೀಡಿತ ಜಿಲ್ಲೆಯ ಬಹುದಿನದ ಬೇಡಿಕೆಯಾದ ಕಬಿನಿ ಎರಡನೇ ಹಂತವನ್ನು ಪೂರೈಸಬೇಕು. ಜಿಲ್ಲೆಯ ರೈತರು ತಾವು ಬೆಳೆದ ತೆಗೆದ ಮರಗಳನ್ನು ಯಾರದೇ ಅನುಮತಿ ಇಲ್ಲದೆ ಕಟಾವು ಮಾಡಿಸಿಕೊಳ್ಳಲು ಹಾಗೂ ಮಾರಾಟ ಮಾಡಲು ಇರುವ ನಿರ್ಬಂಧವನ್ನು ತೆಗೆಯಬೇಕು. ಜಿಲ್ಲೆಯಲ್ಲಿ ತಾಲೂಕಿಗೊಂದು ಕೋಲ್ಡ್ ಸ್ಟೋರೇಜ್ ಅನ್ನು ಸ್ಥಾಪಿಸಲು ಕ್ರಮ ವಹಿಸಬೇಕು. ಬದನಗುಪ್ಪೆ-ಕಲ್ಲಂಬಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಸ್ಥಾಪನೆ ಆಗಿರುವ ಕೈಗಾರಿಕೆಗಳಲ್ಲಿ ಜಿಲ್ಲೆಯ ಯುವಕರಿಗೆ ಇಂತಿಷ್ಟು ಉದ್ಯೋಗ ಎಂದು ಕಾಯ್ದಿರಿಸಬೇಕು. ಹಾಗೂ ವಶ ಪಡಿಸಿಕೊಂಡಿರುವ ಭೂಮಿಗೆ ರೈತರಿಗೆ ಶೀಘ್ರ ಪರಿಹಾರ ನೀಡಬೇಕು. ರೈತರು ಬೆಳೆದ ಬೆಳೆಗಳನ್ನು ಶೀಘ್ರವಾಗಿ ಖರೀದಿಸಲು ವ್ಯವಸ್ಥೆ ಆಗುವಂತೆ ಶಾಶ್ವತ ಖರೀದಿ ಕೇಂದ್ರಗಳನ್ನು ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.
Kshetra Samachara
31/01/2025 04:27 pm