", "articleSection": "News", "image": { "@type": "ImageObject", "url": "https://prod.cdn.publicnext.com/s3fs-public/40083620250131055950filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "VeereshChikkamangaluru" }, "editor": { "@type": "Person", "name": "9731141698" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಶಿವಮೊಗ್ಗ : ಜಿಲ್ಲೆಯಲ್ಲಿ ಬಾಲ್ಯ ವಿವಾಹ ಮತ್ತು ಪೋಕ್ಸೊ ಪ್ರಕರಣಗಳು ಹೆಚ್ಚು ದಾಖಲಾಗುತ್ತಿದೆ. ಸಮಾಜದಲ್ಲಿ ಈ ಪಿಡುಗನ್ನು ನಿವಾರಿಸಲು ಈಗಾಗಲೇ...Read more" } ", "keywords": "Node,Shimoga,News", "url": "https://publicnext.com/node" } ಶಿವಮೊಗ್ಗ ಜಿಲ್ಲೆಯಲ್ಲಿ ಬಾಲ್ಯ ವಿವಾಹ, ಪೋಕ್ಸೊ ಪ್ರಕರಣ ಹೆಚ್ಚಳ - ಅಪರ್ಣಾ ಎಂ ಕೊಳ್ಳಾ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ ಜಿಲ್ಲೆಯಲ್ಲಿ ಬಾಲ್ಯ ವಿವಾಹ, ಪೋಕ್ಸೊ ಪ್ರಕರಣ ಹೆಚ್ಚಳ - ಅಪರ್ಣಾ ಎಂ ಕೊಳ್ಳಾ

ಶಿವಮೊಗ್ಗ : ಜಿಲ್ಲೆಯಲ್ಲಿ ಬಾಲ್ಯ ವಿವಾಹ ಮತ್ತು ಪೋಕ್ಸೊ ಪ್ರಕರಣಗಳು ಹೆಚ್ಚು ದಾಖಲಾಗುತ್ತಿದೆ. ಸಮಾಜದಲ್ಲಿ ಈ ಪಿಡುಗನ್ನು ನಿವಾರಿಸಲು ಈಗಾಗಲೇ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಆಂದೋಲನ ಮಾಡುತ್ತಿದೆ. ಅದಕ್ಕೆ ಜಿಲ್ಲಾ ಶಿಕ್ಷಣ ಇಲಾಖೆಯು ಸಹಕಾರ ನೀಡುವ ಮೂಲಕ ಜಾಗೃತಿ ಮೂಡಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯರಾದ ಅಪರ್ಣಾ ಎಂ ಕೊಳ್ಳಾ ಹೇಳಿದರು.

ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಹಯೋಗದೊಂದಿಗೆ ನಗರದ ಜಿಲ್ಲಾ ಶೈಕ್ಷಣಿಕ ತರಬೇತಿ ಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಿದ್ದ ಆರ್‌ಟಿಇ ಕಾಯ್ದೆಯ ಸಮರ್ಪಕ ಅನುಷ್ಠಾನದ ಕುರಿತು ಶಿಕ್ಷಣ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು

ಬಾಲ್ಯ ವಿವಾಹ ಮತ್ತು ಪೋಕ್ಸೋ ಪ್ರಕರಣಗಳಲ್ಲಿ ಹಿಂದಿಗಿಂತ 2024-25 ರಲ್ಲಿ ಹೆಚ್ಚಿನ ಪ್ರಕರಣಗಳು ಆಯೋಗದ ಗಮನಕ್ಕೆ ಬಂದಿವೆ. ಅದರಲ್ಲಿ ಸರ್ಕಾರಿ ಶಾಲೆಯ 8, 9 ನೇ ತರಗತಿ ಹಾಗೂ ಸರ್ಕಾರಿ ಕಾಲೇಜು ವಿದ್ಯಾರ್ಥಿಗಳೆ ಹೆಚ್ಚಾಗಿದ್ದಾರೆ. ವಿದ್ಯಾರ್ಥಿಗಳು ಮನೆ ಬಿಟ್ಟರೆ ಕಾಲೇಜಿನಲ್ಲಿ ಹೆಚ್ಚಿನ ಸಮಯ ಕಳೆಯುತ್ತಾರೆ. ಅವರೆಲ್ಲಾ ಹೊಣೆ, ರಕ್ಷಣೆ ಶಿಕ್ಷಣ ಇಲಾಖೆಯದ್ದಾಗಿದೆ. ಬಾಲ್ಯ ವಿವಾಹ ಹಾಗೂ ಪೋಕ್ಸೋ ಪ್ರಕರಣವನ್ನು ತಡೆಯುವಲ್ಲಿ ಶಿಕ್ಷಣ ಇಲಾಖೆ ಸಹಕರಿಸಬೇಕು. ಇದನ್ನು ತಡೆಗಟ್ಟುವಲ್ಲಿ ಜಿಲ್ಲಾ ಶಿಕ್ಷಣ ಇಲಾಖೆ ಮುಂದಾಗಬೇಕು. ಶಿಕ್ಷಣ ಇಲಾಖೆಯ ಅಡಿಯಲ್ಲಿ ಎಫ್‌ಐಆರ್ ದಾಖಲಾಗುವಂತೆ ಮಾಡಬೇಕು ಎಂದು ತಿಳಿಸಿದರು. ಆರ್‌ಟಿಇ ಕಾಯ್ದೆಯ ಬಗ್ಗೆ ಪ್ರತಿ ತಾಲ್ಲೂಕಿನ ಬಿಇಓಗಳು ಗಮನಹರಿಸಬೇಕು. ಪ್ರತಿ ತಾಲ್ಲೂಕಿನಲ್ಲಿ ಎಷ್ಟು ಮಕ್ಕಳು ಆರ್‌ಟಿಇ ಅಡಿಯಲ್ಲಿ ಶಾಲೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ನೀಡಬೇಕು. ಖಾಸಗಿ ಮತ್ತು ಅನುದಾನಿತ ಶಾಲೆಗಳಲ್ಲಿ ಆರ್‌ಟಿಇ ಶಿಕ್ಷಣ ಸರಿಯಾದ ಕ್ರಮದಲ್ಲಿ ನೀಡುತ್ತಿದ್ದಾರೆಯೇ ಎಂದು ಪರಿಶೀಲನೆ ಮಾಡಬೇಕು. ಇದರಡಿಯಲ್ಲಿನ ಓದುವ ಮಕ್ಕಳಿಗೆ ಸರ್ಕಾರ ನೀಡುವ ಸೌಲಭ್ಯಗಳನ್ನು ಶಿಕ್ಷಣ ಇಲಾಖೆೆ ಸರಿಯಾಗಿ ತಲುಪಿಸಬೇಕು ಎಂದರು.

Edited By : PublicNext Desk
Kshetra Samachara

Kshetra Samachara

31/01/2025 05:59 pm

Cinque Terre

920

Cinque Terre

0

ಸಂಬಂಧಿತ ಸುದ್ದಿ