ಹಾಸನ : ಖಾಸಗಿ ಬಸ್ ಅಡ್ಡಗಟ್ಟಿ ಮಾರಕಾಸ್ತ್ರದಿಂದ ದಾಳಿ ಮಾಡಿದ್ದ ಆರೋಪಿಯನ್ನು ಬಂಧಿಸಲು ತೆರಳಿದ್ದಾಗ, ನಮ್ಮ ಅಧಿಕಾರಿಗಳು ಸಿಬ್ಬಂದಿ ಮೇಲೆ ಹಲ್ಲೆ ಮಾಡಲು ಯತ್ನಿಸಿದಾಗ ಆರೋಪಿ ಕಾಲಿಗೆ ಗುಂಡು ಹಾರಿಸಲಾಗಿದೆ ಎಂದು ಎಸ್ಪಿ ಮೊಹಮದ್ ಸುಜೀತಾ, ಸ್ಪಷ್ಟನೆ ನೀಡಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಜ.28 ರಂದು ರಾತ್ರಿ ರೌಡಿ ಶೀಟರ್ ಮನುಗೌಡ ಎಂಬಾತ, ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ತಡೆದು ಚಾಲಕನ ಮೇಲೆ ಹಲ್ಲೆ ಮಾಡಿದ್ದ. ಬಸ್ ಡ್ರೈವರ್ ನೀಡಿದ ದೂರು ಆಧರಿಸಿ ಡಿ.30ರ ಸಂಜೆ ಬೆಂಗಳೂರಿನ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಪತ್ತೆಹಚ್ಚಿ ಬಂಧಿಸಿ ಹಾಸನಕ್ಕೆ ಕರೆತರಲಾಗುತ್ತಿತ್ತು. ಶಾಂತಿಗ್ರಾಮ ಬಳಿ ಶೌಚಾಲಯಕ್ಕೆ ತೆರಳುವಾಗ ಪೊಲೀಸ್ ಸಿಬ್ಬಂದಿಗಳಾದ ಲೋಕೇಶ್, ಕುಮಾರ್, ಮೋಹನ್ ಕೃಷ್ಣ ಅವರ ಮೇಲೆ ಹಲ್ಲೆ ಮಾಡಿದ್ದಾನೆ. ಬಳಿಕ ಆತ್ಮ ರಕ್ಷಣೆಗಾಗಿ ಆರೋಪಿ ಕಾಲಿಗೆ ಗುಂಡು ಹಾರಿಸಲಾಗಿದೆ ಎಂದರು.
ನಮ್ಮ ಸಿಬ್ಬಂದಿಗಳಿಗೂ ಸಣ್ಣ ಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಶಾಂತಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದರು.
PublicNext
31/01/2025 07:42 pm