ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಾಳೆ ಕೇಂದ್ರ ಬಜೆಟ್ ಮಂಡನೆ : ರಾಜ್ಯದ ನೀರಿಕ್ಷೆಗಳೇನು ?

ಬೆಂಗಳೂರು : ನಾಳೆ ಕೇಂದ್ರದ ಮೋದಿ ಸರ್ಕಾರ ಬಜೆಟ್ ಮಂಡಿಸಲಿದೆ ಕೇಂದ್ರದ ವಿತ್ತ ಸಚಿವೆ ನಿರ್ಮಾಲಾ ಸೀತರಾಮನ್ ನಾಳೆ ಬಜೆಟ್ ಮಂಡಿಸುತ್ತಿದ್ದಾರೆ. ಕರ್ನಾಟಕ ಸೇರಿದಂತೆ ಇಡೀ ದೇಶ ನಾಳೆ ಬಜೆಟ್ ಮಂಡಿಸುವತ್ತ ಕಣ್ಣು ಹಾಯಿಸಿದೆ. ಎಂದಿನಂತೆ ಈ ಬಾರಿಯೂ ರಾಜ್ಯ ಸರ್ಕಾರ ಬಜೆಟ್ ನಲ್ಲಿ ಸಾಕಷ್ಟು ನಿರೀಕ್ಷೆಗಳನ್ನ ಇಟ್ಟುಕೊಂಡಿದೆ.

ನಿರ್ಮಾಲಾ ಸೀತಾರಾಮನ್ ಅವರಿಗೆ ಪತ್ರ ಮೂಲಕ ರಾಜ್ಯದ ಮೂಲಭೂತ ಸೌಕರ್ಯ ಮತ್ತು ಅಭಿವೃದ್ಧಿಗೆ ಅನುದಾನ ಒದಗಿಸಿಕೊಡಿ ಎಂದು ಈಗಾಗಲೇ ಮನವಿಯನ್ನ ರಾಜ್ಯ ಸರ್ಕಾರ ಮಾಡಿದೆ.

ರಾಜ್ಯದ ನೀರಾವರಿ ಯೋಜನೆ ,ರಸ್ತೆ , ರೈಲ್ವೆ ಸೇರಿದಂತೆ ಮೂಲಭೂತ ಸೌಕರ್ಯಗಳಿಗೆ ಅನುದಾನ ಒದಗಿಸಿ

ಈ ಹಿಂದೆಯೇ ಘೋಷಿಸಿದ್ದ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಅನುದಾನವನ್ನ ಬಿಡುಗಡೆ ಮಾಡಬೇಕು, ಮೇಕೆದಾಟು ಮತ್ತು ಮಹದಾಯಿ ಯೋಜನೆಗೆ ಅನುದಾನ ಬಿಡುಗಡೆ ಮಾಡಬೇಕು, 15 ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ ರಾಜ್ಯಕ್ಕೆ ವಿಶೇಷ ಅನುದಾನ ಬಿಡುಗಡೆಗೆ ಕೇಂದ್ರದ ಬಳಿ ಮನವಿ ಮಾಡಿಕೊಳ್ಳಲಾಗಿದೆ.

ಇನ್ನೂ ರಾಜಧಾನಿ ಬೆಂಗಳೂರಿನ ಅಭಿವೃದ್ಧಿಗಾಗಿ ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಪಿಆರ್ ಆರ್ ಬಿಸಿನೆಸ್ ಕಾರಿಡಾರ್, ನೀರು ಸರಬರಾಜು ಸೇರಿ ಅನೇಕ ಪ್ರಮಖ ಯೋಜನೆಗಳಿಗಾಗಿ 90 ಸಾವಿರ ಕೋಟಿ ಅನುದಾನ ನೀಡಬೇಕು ಎಂದು ಕೇಂದ್ರಕ್ಕೆ ಮನವಿ ಮಾಡಲಾಗಿದೆ.

ನಮ್ಮ ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾಗಿ ತೆರಳಿರುವ ನಿರ್ಮಾಲಾ ಸೀತಾರಾಮನ್ ಅವರು ಈ ಬಾರಿಯ ಬಜೆಟ್‌ನಲ್ಲಿ ರಾಜ್ಯ ಸರ್ಕಾರದ ಮನವಿಗೆ ಸ್ಪಂದಿಸಿ ಹೆಚ್ಚಿನ ಅನುದಾನ ನೀಡುತ್ತಾರಾ ಅನ್ನೋದಕ್ಕೆ ನಾಳೆ ಸ್ಪಷ್ಟ ಚಿತ್ರಣ ಸಿಗಲಿದೆ.

Edited By : Nagaraj Tulugeri
PublicNext

PublicNext

31/01/2025 08:14 pm

Cinque Terre

21.28 K

Cinque Terre

2

ಸಂಬಂಧಿತ ಸುದ್ದಿ