", "articleSection": "News", "image": { "@type": "ImageObject", "url": "https://prod.cdn.publicnext.com/s3fs-public/40083620250131095315filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "VeereshChikkamangaluru" }, "editor": { "@type": "Person", "name": "9731141698" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಶಿವಮೊಗ್ಗ : ಹೊಸನಗರ ತಾಲೂಕಿನ ಬಾಳೂರು ಪ್ರಾಥಮಿಕ ಆರೋಗ್ಯ ಉಪಕೇಂದ್ರದಲ್ಲಿ ಸಮುದಾಯ ಆರೋಗ್ಯಾಧಿಕಾರಿ ಇಲ್ಲದೆ ಸಾರ್ವಜನಿಕರು ಪರದಾಡುವಂತಾಗಿದೆ ...Read more" } ", "keywords": "Node,Shimoga,News", "url": "https://publicnext.com/node" }
ಶಿವಮೊಗ್ಗ : ಹೊಸನಗರ ತಾಲೂಕಿನ ಬಾಳೂರು ಪ್ರಾಥಮಿಕ ಆರೋಗ್ಯ ಉಪಕೇಂದ್ರದಲ್ಲಿ ಸಮುದಾಯ ಆರೋಗ್ಯಾಧಿಕಾರಿ ಇಲ್ಲದೆ ಸಾರ್ವಜನಿಕರು ಪರದಾಡುವಂತಾಗಿದೆ ಎಂದು ಆರೋಪಿಸಿ ಬಾಳೂರು ಸಾರ್ವಜನಿಕ ಹೋರಾಟ ಸಮಿತಿಯ ಮಂಜುನಾಥ ಆಚಾರ್ ನೇತೃತ್ವದಲ್ಲಿ ಗ್ರಾಮಸ್ಥರು ಗ್ರಾಮ ಪಂಚಾಯಿತ್ ಎದುರು ಪ್ರತಿಭಟನೆ ನಡೆಸಿದರು.
ಹೋರಾಟಗಾರ ನೆವಟೂರು ಮಂಜುನಾಥ ಆಚಾರ್ ಮಾತನಾಡಿ, ಇಲ್ಲಿ ಸಾರ್ವಜನಿಕರ ಅನುಕೂಲಕ್ಕೆಂದು ಉಪಕೇಂದ್ರ ತೆರೆದಿರುವುದು ನೆಪ ಮಾತ್ರಕ್ಕೆ ಎನ್ನುವಂತಾಗಿದೆ. ದಿನದ ಬಹುತೇಕ ಸಮಯ ಕಛೇರಿಯ ಬೀಗ ಜಡಿದಿದ್ದು ಸಿಬ್ಬಂದಿ ನಾಪತ್ತೆಯಾಗಿರುತ್ತಾರೆ. ಇದರಿಂದ ಬೇರೆ ಊರುಗಳಿಗೆ ರೋಗಿಗಳು ಹೋಗಬೇಕಾದ ಅನಿವಾರ್ಯತೆ ಎದುರಾಗಿದೆ. ಈ ಬಗ್ಗೆ ಗ್ರಾಮ ಪಂಚಾಯ್ತಿಗೆ ಮತ್ತು ಮೇಲಾಧಿಕಾರಿಗಳಿಗೆ ಲಿಖಿತವಾಗಿ ದೂರು ನೀಡಲಾದರೂ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.
Kshetra Samachara
31/01/2025 09:53 pm