ನವದೆಹಲಿ: ಕಾಂಗ್ರೆಸ್ ಮಾಜಿ ಅಧ್ಯಕ್ಷೆ ರಾಜ್ಯಸಭಾ ಸದಸ್ಯೆ ಸೋನಿಯಾ ಗಾಂಧಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆ ಅವಮಾನಕಾರಿಯಾಗಿ ಮಾತನಾಡಿದ್ದಾರೆ. ಸೋನಿಯಾ ಗಾಂಧಿ ಹೇಳಿಕೆ ವಿರುದ್ಧ ಬಿಜೆಪಿ ಕಿಡಿ ಕಾರಿದೆ.
ಬಜೆಟ್ ಅಧಿವೇಶನದ ಮುನ್ನ ದಿನವಾದ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ ಸದನವನ್ನು ಉದ್ದೇಶಿಸಿ ಮಾತನಾಡಿದರು.
ರಾಷ್ಟ್ರಪತಿಗಳ ಭಾಷಣ ಮುಕ್ತಾಯದ ಬಳಿಕ ಸಂಸತ್ ಹೊರಗಡೆ ಬಂದ ಸೋನಿಯಾ ಗಾಂಧಿ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ.
ಈ ವೇಳೆ ಸೋನಿಯಾ ಗಾಂಧಿ, ದ್ರೌಪದಿ ಮುರ್ಮು Poor Lady, ಭಾಷಣ ಮುಗಿಸುವ ಹೊತ್ತಿಗೆ ರಾಷ್ಟ್ರಪತಿಗಳು ಸುಸ್ತಾಗಿ ಹೋಗಿದ್ದರು. ಅವರಿಗೆ ಮಾತನಾಡಲು ಕಷ್ಟವಾಗುತ್ತಿತ್ತು ಎಂದು ಹೇಳಿದರು. ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ಭಾಷಣ ತುಂಬಾ ಬೋರ್ ಆಗಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸೋನಿಯಾ ಗಾಂಧಿ ನೀಡಿದ ಈ ಹೇಳಿಕೆ ವಿರುದ್ಧ ಬಿಜೆಪಿ ಕಿಡಿ ಕಾರಿದೆ. ಬಿಜೆಪಿಯ ಹಲವಾರು ನಾಯಕರು 'ಎಕ್ಸ್' ಖಾತೆ ಮೂಲಕ ಸೋನಿಯಾ ಗಾಂಧಿ ವಿರುದ್ಧ ತಮ್ಮ ಟೀಕಾಸ್ತ್ರ ಪ್ರಯೋಗಿಸಿದ್ದಾರೆ.
PublicNext
31/01/2025 10:30 pm