ಮಡಿಕೇರಿ : ಮಾರ್ಚ್ ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಮಡಿಕೇರಿಯಲ್ಲಿ ನಡೆಯುವ 25ನೇ ವರ್ಷದ ಪ್ರತಿಷ್ಠಿತ ಮುದ್ದಂಡ ಕಪ್ ಹಾಕಿ ಹಬ್ಬದ ನೇತೃತ್ವ ವಹಿಸಿರುವ ಮುದ್ದಂಡ ಕುಟುಂಬಸ್ಥರು ಹಾಗೂ ಕೊಡವ ಹಾಕಿ ಅಕಾಡೆಮಿಯ ಪ್ರಮುಖರು ಭಾಗಮಂಡಲದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು.
ಕೊಡವ ಕುಟುಂಬ ತಂಡಗಳ ನಡುವಿನ ಹಾಕಿ ಉತ್ಸವಕ್ಕೆ ಸರಕಾರದಿಂದ ರೂ.1.50 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದರು. ಅಲ್ಲದೆ ಹಾಕಿ ಉತ್ಸವಕ್ಕೆ ಆಗಮಿಸುವಂತೆ ಆಹ್ವಾನ ನೀಡಿದರು. ನಂತರ ಕೊಡಗಿನ ಸಾಂಪ್ರದಾಯಿಕ ಒಡಿಕತ್ತಿಯನ್ನು ಮುಖ್ಯಮಂತ್ರಿಗಳಿಗೆ ಕೊಡುಗೆಯಾಗಿ ನೀಡಿದರು.
ಈ ಸಂದರ್ಭ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ಮುದ್ದಂಡ ಹಾಕಿ ಉತ್ಸವ ಸಮಿತಿಯ ಅಧ್ಯಕ್ಷ ಮುದ್ದಂಡ ರಶಿನ್ ಸುಬ್ಬಯ್ಯ, ಗೌರವಾಧ್ಯಕ್ಷ ಮುದ್ದಂಡ ಬಿ.ದೇವಯ್ಯ, ಕೊಡವ ಹಾಕಿ ಅಕಾಡೆಮಿಯ ಉಪಾಧ್ಯಕ್ಷ ಕುಕ್ಕೇರ ಜಯ ಚಿಣ್ಣಪ್ಪ, ಸದಸ್ಯ ಸಂಪನ್ ಅಯ್ಯಪ್ಪ, ಮುದ್ದಂಡ ಕುಟುಂಬಸ್ಥರಾದ ಮುದ್ದಂಡ ರಾಯ್ ತಮ್ಮಯ್ಯ, ಮುದ್ದಂಡ ಡೀನ್ ಬೋಪಣ್ಣ, ಮುದ್ದಂಡ ರಂಜಿತ್ ಪೊನ್ನಪ್ಪ, ಮುದ್ದಂಡ ಅಶೋಕ್ ನಾಣಿಯಪ್ಪ, ಮುದ್ದಂಡ ಆದರ್ಶ್, ಮುದ್ದಂಡ ಚಂಗಪ್ಪ ಮತ್ತಿತರರು ಹಾಜರಿದ್ದರು.
Kshetra Samachara
01/02/2025 08:19 am