ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಡಿಕೇರಿ: ನುಡಿದಂತೆ ನಡೆದ ಸರ್ಕಾರ ಕಾಂಗ್ರೆಸ್ - ಸಿದ್ದರಾಮಯ್ಯ

ಮಡಿಕೇರಿ: ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಜಯಗೊಳಿಸಿದ ಕೊಡುಗಿನ ಜನತೆಗೆ ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಅಭಿನಂದಿಸಿದರು. ಕಾಂಗ್ರೆಸ್ ಪಕ್ಷ ನುಡಿದಂತೆ ನಡೆಯುವ ಪಕ್ಷವಾಗಿದ್ದು, ಕಾಂಗ್ರೆಸ್ ನೀಡಿದ ಭರವಸೆಗಳನ್ನು ಈಡೇರಿಸಿದೆ.

2013-18ರ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ, ಪಕ್ಷ ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಲಾಗಿದೆ. ಆದರೆ 2018ರಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ , ತಾನು ನೀಡಿದ್ದ ಭರವಸೆಗಳಲ್ಲಿ ಶೇ.10 ರಷ್ಟನ್ನು ಕೂಡ ಈಡೇರಿಸಲಿಲ್ಲ ಎಂದರು. ಜೊತೆಗೆ ಮಧ್ಯವರ್ತಿಗಳ ಹಾವಳಿಯನ್ನು ತಪ್ಪಿಸಿ, ಫಲಾನುಭವಿಗಳ ಖಾತೆಗೆ ಹಣ ತಲುಪಿಸುವ ವ್ಯವಸ್ಥೆಯನ್ನು ಸರ್ಕಾರ ಕಲ್ಪಿಸಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ರು.

Edited By : PublicNext Desk
Kshetra Samachara

Kshetra Samachara

01/02/2025 08:44 am

Cinque Terre

560

Cinque Terre

0