ಮೈಸೂರು : ಸುತ್ತೂರು ಜಾತ್ರಾ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ. ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾದ ಸಿಎಂಗೆ ಬಿಜೆಪಿ ಶಾಸಕ ಮಾಜಿ ಸಚಿವ ಎಸ್.ಟಿ ಸೋಮಶೇಖರ್, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ ಮಹದೇವಪ್ಪ ಸಾಥ್ ನೀಡಿದ್ರು.
ಜೊತೆಯಲ್ಲಿ ಸಚಿವರಾದ ಬೋಸ್ ರಾಜು, ಎಚ್ ಕೆ ಪಾಟೀಲ್, ಶಾಸಕರಾದ ಹರೀಶ್ ಗೌಡ, ವೀರೇಂದ್ರ ಪಪ್ಪಿ, ಡಿ.ರವಿಶಂಕರ್, ಮಂಜುನಾಥ್, ಗಣೇಶ್ ಪ್ರಸಾದ್, ದರ್ಶನ್ ಧ್ರುವನಾರಾಯಣ್ ಸೇರಿದಂತೆ ಹಲವು ಅಧಿಕಾರಿಗಳು, ಮಾಜಿ ಶಾಸಕರು ಸಮಾರೋಪ ಸಮಾರಂಭದಲ್ಲಿ ಭಾಗಿಯಾದರು. ಆದ್ರೆ ಎಸ್.ಟಿ.ಸೋಮಶೇಖರ್ ಬಂದಿದ್ದು ಎಲ್ಲರಿಗೂ ಆಶ್ಚರ್ಯ ಎನಿಸಿತು.
PublicNext
01/02/2025 01:15 pm