ಚಿಕ್ಕಮಗಳೂರು: ನಕ್ಸಲ್ ಚಳುವಳಿಯಲ್ಲಿ ಸಕ್ರಿಯವಾಗಿದ್ದ ಕೊನೆಯ ನಕ್ಸಲ್ ಕೋಟೆಹೊಂಡ ರವೀಂದ್ರ ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಎಸ್ಪಿ ವಿಕ್ರಮ್ ಅಮಟೆ ಮುಂದೆ ಶರಣಾಗಿದ್ದಾರೆ.
ಶಾಂತಿಗಾಗಿ ನಾಗರಿಕ ವೇದಿಕೆ ಮತ್ತು ನಕ್ಸಲ್ ಶರಣಾಗತಿ ಸಮಿತಿ ಸದಸ್ಯರೊಂದಿಗೆ ಚಿಕ್ಕಮಗಳೂರು ಎಸ್ಪಿ ಕಚೇರಿಗೆ ಆಗಮಿಸಿ ಶರಣಾಗಿದ್ದಾರೆ. ಕಳೆದ ಒಂದೂವರೆ ದಶಕಗಳಿಂದ ಭೂಗತರಾಗಿದ್ದ ಕೋಟೆಹೊಂಡ ರವೀಂದ್ರ ಇಂದು ಶರಣಾಗತಿಯಾಗುವ ಮೂಲಕ ಕರ್ನಾಟಕ ನಕ್ಸಲ್ ಮುಕ್ತ ರಾಜ್ಯವಾಗಿದೆ.
PublicNext
01/02/2025 01:42 pm