", "articleSection": "Infrastructure,News", "image": { "@type": "ImageObject", "url": "https://prod.cdn.publicnext.com/s3fs-public/40083620250201023358filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "VeereshChikkamangaluru" }, "editor": { "@type": "Person", "name": "9731141698" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಶಿವಮೊಗ್ಗ : ದೂರದೃಷ್ಟಿಯ ಕೇಂದ್ರ ಪುರಸ್ಕೃತ ಬುಡಕಟ್ಟು ಕಲ್ಯಾಣ ಯೋಜನೆಯ ಧರ್ತಿ ಆಭಾ ಜನಜಾತೀಯ ಗ್ರಾಮ ಉತ್ಕರ್ಷ್‌ಅಭಿಯಾನ ಯೋಜನೆಯಡಿ ಜಿಲ್ಲೆಯ ಹಿ...Read more" } ", "keywords": "Node,Shimoga,News,Infrastructure", "url": "https://publicnext.com/node" }
ಶಿವಮೊಗ್ಗ : ದೂರದೃಷ್ಟಿಯ ಕೇಂದ್ರ ಪುರಸ್ಕೃತ ಬುಡಕಟ್ಟು ಕಲ್ಯಾಣ ಯೋಜನೆಯ ಧರ್ತಿ ಆಭಾ ಜನಜಾತೀಯ ಗ್ರಾಮ ಉತ್ಕರ್ಷ್‌ಅಭಿಯಾನ ಯೋಜನೆಯಡಿ ಜಿಲ್ಲೆಯ ಹಿಂದುಳಿದ ವಿರುಪಿನಕೊಪ್ಪ ಮತ್ತು ಸದಾಶಿವಪುರ ಗ್ರಾಮಗಳನ್ನು ಆಯ್ಕೆ ಮಾಡಿದ್ದು, ಈ ಗ್ರಾಮಗಳ ಸರ್ವಾಗೀಣ ವಿಕಾಸಕ್ಕೆ ಯೋಜನೆ ರೂಪಿಸಿ, ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್ ಹೇಳಿದರು.
ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕೇಂದ್ರ ಸರ್ಕಾರವು ಈ ಯೋಜನೆಯಡಿ ಬುಡಕಟ್ಟು ಜನಾಂಗದ ಸದಸ್ಯರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರುವ ಪ್ರಯತ್ನ ಇದಾಗಿದ್ದು, ಬುಡಕಟ್ಟು ಜನಾಂಗದ ಬಹುಸಂಖ್ಯಾತರು ವಾಸಿಸುವ ಗ್ರಾಮಗಳಲ್ಲಿ ಸಮಗ್ರ ಅಭಿವೃದ್ಧಿಗೆ ಕ್ರಿಯಾ ಯೋಜನೆ ರೂಪಿಸಲಾಗುವುದಲ್ಲದೇ ಮೂಲಭೂತ ಸೌಕರ್ಯ, ಆರೋಗ್ಯ, ಶಿಕ್ಷಣ ಮತ್ತು ಜೀವನೋಪಾಯ ಕೌಶಲ್ಯಗಳ ಕುರಿತು ಕಾರ್ಯಕ್ರಮಗಳನ್ನು ಆಯೋಜಿಸಿ, ಅನುಷ್ಠಾನಗೊಳಿಸಲಾಗುವುದು ಎಂದರು.
ವಿಶೇಷವಾಗಿ ನಗರದಿಂದ ಅತ್ಯಂತ ದೂರದಲ್ಲಿರುವ ಮತ್ತು ಹಿಂದುಳಿದ ಬುಡಕಟ್ಟು ಪ್ರದೇಶಗಳಿಗೆ ಅಗತ್ಯ ಸೇವೆಗಳನ್ನು ಒದಗಿಸುವುದು, ಇದರೊಂದಿಗೆ ಸರ್ಕಾರದ ಪ್ರಯತ್ನಗಳ ಸಂಯೋಜನೆ, ಪ್ರತ್ಯೇಕತೆಯನ್ನು ಹೋಗಲಾಡಿಸಿ, ಪರಿಣಾಮಕಾರಿ ಬದಲಾವಣೆಗಾಗಿ ಒಮ್ಮತ ಮೂಡಿಸುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ ಎಂದರು.
Kshetra Samachara
01/02/2025 02:34 pm