", "articleSection": "Crime,Law and Order", "image": { "@type": "ImageObject", "url": "https://prod.cdn.publicnext.com/s3fs-public/378325-1738400927-14.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SuryaMysore" }, "editor": { "@type": "Person", "name": "somashekar" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮೈಸೂರು : ಪ್ರಶಾಂತ ಸಂಬರ್ಗಿ ವಿರುದ್ಧ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ನಟ ನಿರ್ಮಾಪಕ ಪ್ರಕಾಶ್ ರಾಜ್ ಎಫ್ಐಆರ್ ದಾಖಲಿಸಿದ್ದಾರೆ. ಕು...Read more" } ", "keywords": "Prakash Raj, Kumbh Mela, Viral Photo, Fake News, FIR Against Prashant Sambargi, Mysore News, Karnataka News, Indian Actor, Social Media Controversy, Kumbh Mela Participation,Mysore,Crime,Law-and-Order", "url": "https://publicnext.com/node" } ಮೈಸೂರು: ಕುಂಭಮೇಳದಲ್ಲಿ ಪ್ರಕಾಶ್ ರೈ ಸ್ನಾನ ಮಾಡುವ ಫೋಟೋ ವೈರಲ್, ಪ್ರಶಾಂತ್ ಸಂಬರ್ಗಿ ವಿರುದ್ಧ FIR.!
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈಸೂರು: ಕುಂಭಮೇಳದಲ್ಲಿ ಪ್ರಕಾಶ್ ರೈ ಸ್ನಾನ ಮಾಡುವ ಫೋಟೋ ವೈರಲ್, ಪ್ರಶಾಂತ್ ಸಂಬರ್ಗಿ ವಿರುದ್ಧ FIR.!

ಮೈಸೂರು : ಪ್ರಶಾಂತ ಸಂಬರ್ಗಿ ವಿರುದ್ಧ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ನಟ ನಿರ್ಮಾಪಕ ಪ್ರಕಾಶ್ ರಾಜ್ ಎಫ್ಐಆರ್ ದಾಖಲಿಸಿದ್ದಾರೆ. ಕುಂಭಮೇಳದಲ್ಲಿ ನಟ ಪ್ರಕಾಶ್ ರೈ ಸ್ನಾನ ಮಾಡುತ್ತಿರುವ ರೀತಿಯ ಫೋಟೋ ವೈರಲ್ ಮಾಡಿದ್ದಾರೆಂದು ಆರೋಪಿಸಿ ಪ್ರಶಾಂತ್ ಸಂಬರ್ಗಿ ವಿರುದ್ಧ ದೂರು ನೀಡಿ ಎಫ್ ಐ ಆರ್ ದಾಖಲಿಸಿರುವುದಾಗಿ ಖುದ್ದು ನಟ ಪ್ರಕಾಶ್ ರಾಜ್ ಪ್ರತಿಕ್ರಿಯೆ ನೀಡಿದ್ದಾರೆ. ಕುಂಭಮೇಳದ ಪುಣ್ಯ ಸ್ನಾನ ದೇಶದಲ್ಲಿ ನಡೆಯುತ್ತಿದೆ. ಹಿಂದೂ ಧರ್ಮದವರಿಗೆ ಹಾಗೂ ದೇವರನ್ನ ನಂಬುವವರಿಗೆ ಪುಣ್ಯವಾದ ಸ್ಥಳ ಎಂದಿದ್ದಾರೆ.

ಅಲ್ಲದೇ, ಎಐ ಆ್ಯಪ್ ಬಳಸಿ ಪ್ರಕಾಶ್ ರಾಜ್ ಕುಂಭಮೇಳದಲ್ಲಿ ಸ್ನಾನ ಮಾಡಿದ್ರಾ.? ಎಂದು ಫೋಟೊ ವೈರಲ್ ಮಾಡುತ್ತಿದ್ದಾರೆ. ಅಂತಹ ಪುಣ್ಯದ ಸ್ನಾನ ನಡೆಯಬೇಕದಾರೇ ಅದರಲ್ಲಿ ರಾಜಕಾರಣ ನಡೆಯುತ್ತಿದೆ. ಮೊದಲಿನಿಂದಲೂ ಪ್ರಕಾಶ್ ರೈ ಹಿಂದೂ ವಿರೋಧಿ ಎಂದು ಸುಳ್ಳು ಸುದ್ದಿಯನ್ನ ಹಬ್ಬಿಸಿಕೊಂಡು ಬಂದಿದ್ದಾರೆ. ಪ್ರಶಾಂತ್ ಸಂಬರ್ಗಿ ಪ್ರಖ್ಯಾತರೋ? ಕುಖ್ಯಾತರೊ? ನನಗೆ ಗೊತ್ತಿಲ್ಲ. ದೇಶದಲ್ಲಿ ಸುಳ್ಳು ಸುದ್ದಿಗಳನ್ನ ಹಬ್ಬಿಸುವುದು ಅಭ್ಯಾಸವಾಗಿ ಬಿಟ್ಟಿದೆ. ಇದನ್ನ ಯಾರೂ ಪ್ರಶ್ನೆ ಮಾಡುತ್ತಿಲ್ಲ. ದ್ವೇಷವನ್ನ ಹರಡಿಸುತ್ತಿದ್ದಾರೆ. ಇವರು ನಿಜವಾದ ಧರ್ಮದವರಲ್ಲ. ಜನರ ನಂಬಿಕೆಗೆ ಅಘಾತ ಮಾಡುತ್ತಿದ್ದಾರೆ. ನನ್ನ ವಿರುದ್ಧ ಸಾಕಷ್ಟು ವಿಚಾರದಲ್ಲಿ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಅವರ ಮೇಲೆ ಕೇಸ್ ಹಾಕಿ ಗೆದ್ದಿದ್ದೇನೆ. ಹೀಗಾಗಿ ನಾನು ಪ್ರಶಾಂತ್ ಸಂಬರ್ಗಿ ವಿರುದ್ಧ ದೂರು ನೀಡಿ ಎಫ್ ಐಆರ್ ಮಾಡಿಸಿದ್ದೇನೆ ಎಂದ್ರು.

Edited By : Somashekar
Kshetra Samachara

Kshetra Samachara

01/02/2025 02:39 pm

Cinque Terre

1.54 K

Cinque Terre

0