ಶನಿವಾರಸಂತೆ: ಕಳೆದ 2 ವರ್ಷದ ಹಿಂದೆಯೇ ದುಂಡಳ್ಳಿ, ಬಿಳಹ, ಯಸಳೂರು ರಸ್ತೆ ಅಗಲಿಕರಣ ಕಾಮಗಾರಿ ಪ್ರಾರಂಭಗೊಂಡಿದ್ದರೂ ಅರಣ್ಯ ಇಲಾಖೆ ರಸ್ತೆ ಬದಿಯ ಮರಗಳನ್ನು ತೆರವುಗೊಳಿಸದಿರುವ ಹಿನ್ನಲೆ ರಸ್ತೆ ಕಾಮಗಾರಿ ಸ್ಥಗಿತಗೊಂಡಿದ್ದು, ಇದರಿಂದ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿರುವುದಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಕಾರಣಕರ್ತರಾಗಿದ್ದಾರೆ ಹಿನ್ನಲೆಯಲ್ಲಿ ಗ್ರಾಮಸ್ಥರು ಶನಿವಾರಸಂತೆ ಅರಣ್ಯ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಶನಿವಾರಸಂತೆಯಿಂದ ದುಂಡಳ್ಳಿ, ಬಿಳಹ ಮಾರ್ಗವಾಗಿ ಯಸಳೂರುಗೆ ಸಂಪರ್ಕ ಕಲ್ಪಿಸುವ 9 ಕಿ,ಮಿ.ಉದ್ದದ ರಸ್ತೆ ಅಗಲಿಕರಣ ಕಾಮಗಾರಿಗೆ ಎರಡು ವರ್ಷಗಳ ಹಿಂದೆ ಚಾಲನೆ ನೀಡಲಾಗಿತು. ಆದರೆ ರಸ್ತೆ ಅಗಲಿಕರಣ ಸಂದರ್ಭ ರಸ್ತೆ ಬದಿಯಲ್ಲಿರುವ ಮತ್ತು ಖಾಸಗಿಯವರ ತೋಟದ ಬೇಲಿಯಲ್ಲಿರುವ ಮರಗಳನ್ನು ತೆರವುಗೊಳಿಸುವ ಅಗತ್ಯ ಇದ್ದ ಹಿನ್ನೆಲೆಯಲ್ಲಿ ಲೋಕಪಯೋಗಿ ಇಲಾಖೆ ಅಧಿಕಾರಿಗಳು ಮತ್ತು ಗುತ್ತಗೆದಾರರು ಮರಗಳನ್ನು ತೆರವುಗೊಳಿಸುವಂತೆ ಶನಿವಾರಸಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ನೀಡಿದ್ದರು ಮನವಿ ಸ್ಪಂದಿಸಿದ ಅಧಿಕಾರಿಗಳು ಶೀಘ್ರದಲ್ಲಿ ಮರಗಳನ್ನು ತೆರವುಗೊಳಿಸುವುದಾಗಿ ಭರವಸೆ ನೀಡಿದ್ದರು. ಆದರೆ ಭರವಸೆ ನೀಡಿ ಎರಡು ವರ್ಷಗಳಾಗುತ್ತಿದ್ದರೂ ಅರಣ್ಯ ಇಲಾಖೆಯವರು ಮರಗಳನ್ನು ತೆರವುಗೊಳಿಸುತ್ತಿಲ್ಲ ಎಂದರು. ಇದರಿಂದ ರೊಚ್ವಿಗೆದ್ದ ಗ್ರಾಮಸ್ಥರು ಅರಣ್ಯ ಇಲಾಖೆ ಕಚೇರಿಗೆ ಮತ್ತಿಗೆ ಹಾಕಿ ಆಕ್ರೋಶ ಹೊರ ಹಾಕಿದ್ರು.
Kshetra Samachara
01/02/2025 04:14 pm