", "articleSection": "Politics,Government", "image": { "@type": "ImageObject", "url": "https://prod.cdn.publicnext.com/s3fs-public/40083620250201045031filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "VeereshChikkamangaluru" }, "editor": { "@type": "Person", "name": "9731141698" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಶಿವಮೊಗ್ಗ: 2025-26ನೇ ಸಾಲಿನ ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಬಡವರು, ಯುವಕರು, ರೈತರು ಹಾಗೂ ಮಹಿಳೆಯರ ಏಳಿಗೆಗಾಗಿ ಹೆಚ್ಚು ಆದ್ಯತೆಯನ್ನು ನೀಡಲ...Read more" } ", "keywords": "Node,Shimoga,Politics,Government", "url": "https://publicnext.com/node" } ಶಿವಮೊಗ್ಗ: ಬಡತನ ಮುಕ್ತ ಭಾರತ ನಿರ್ಮಾಣ ಮಾಡುವತ್ತ ಕೇಂದ್ರದ ಬಜೆಟ್ - ರಾಘವೇಂದ್ರ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ: ಬಡತನ ಮುಕ್ತ ಭಾರತ ನಿರ್ಮಾಣ ಮಾಡುವತ್ತ ಕೇಂದ್ರದ ಬಜೆಟ್ - ರಾಘವೇಂದ್ರ

ಶಿವಮೊಗ್ಗ: 2025-26ನೇ ಸಾಲಿನ ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಬಡವರು, ಯುವಕರು, ರೈತರು ಹಾಗೂ ಮಹಿಳೆಯರ ಏಳಿಗೆಗಾಗಿ ಹೆಚ್ಚು ಆದ್ಯತೆಯನ್ನು ನೀಡಲಾಗಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ತಿಳಿಸಿದ್ದಾರೆ.

ಬಜೆಟ್ ಕುರಿತು ಮಾತನಾಡಿದ ಅವರು, ಗ್ರಾಮೀಣ ಭಾಗದ ರೈತರಿಗೆ ಆರ್ಥಿಕ ನೆರವು ನೀಡುವ ದೃಷ್ಟಿಯಿಂದ ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆ ಅಡಿಯಲ್ಲಿ ಕಡಿಮೆ ಇಳುವರಿ ಇರುವ ರಾಷ್ಟ್ರದ ನೂರು ಜಿಲ್ಲೆಗಳನ್ನು ಗುರುತಿಸಿ ಅವುಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ. ಇದರಿಂದ ಸುಮಾರು 1.7 ಕೋಟಿ ರೈತರು ಇದರ ಲಾಭ ಪಡೆಯಲಿದ್ದಾರೆ. ಯುವಕರನ್ನು ಕೃಷಿಯತ್ತ ಸೆಳೆಯುವಲ್ಲಿ ಕೇಂದ್ರ ಸರ್ಕಾರ ಹೆಚ್ಚು ಗಮನ ನೀಡಿದೆ. ಮೂರು ಯೂರಿಯಾ ಪ್ಲಾಂಟ್ ಗಳನ್ನು ದೇಶದಲ್ಲಿ ಆರಂಭಿಸಲಾಗುತ್ತದೆ. ಕೃಷಿ ಕಾರ್ಡ್ ಲೋನ್ ಮೊತ್ತವನ್ನು 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ ಮಾಡಲಾಗಿದೆ. ಮೀನುಗಾರರ ವಲಯಕ್ಕೆ 90.000 ಕೋಟಿ ಅನುದಾನ ನೀಡಲಾಗಿದೆ. ಅದಲ್ಲದೆ ರೈತ ಉತ್ಪಾದನಾ ಸಹಕಾರ ಸಂಘಗಳ ರಚನೆ ಮಾಡಲು ಕ್ರಮ ವಹಿಸಲಾಗಿದೆ ಕೃಷಿ ಉತ್ಪನ್ನಗಳನ್ನು ಹೆಚ್ಚಳ ಮಾಡಲು ಆದ್ಯತೆ ನೀಡಲಾಗಿದೆ.

Edited By : PublicNext Desk
PublicNext

PublicNext

01/02/2025 04:50 pm

Cinque Terre

3.61 K

Cinque Terre

0

ಸಂಬಂಧಿತ ಸುದ್ದಿ