ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಡಗು : 'ಕಾಡಾನೆ' ಕಾಜೂರು ಕರ್ಣ ಸೆರೆ - ಸ್ಥಳಕ್ಕೆ ಶಾಸಕ ಮಂತರ್ ಗೌಡ ಭೇಟಿ, ಪರಿಶೀಲನೆ

ಸೋಮವಾರಪೇಟೆ : ನಾಡಿಗೆ ಲಗ್ಗೆ ಇಟ್ಟು ಸಾರ್ವಜನಿಕರಿಗೆ, ಸ್ಥಳೀಯ ನಿವಾಸಿಗಳಿಗೆ, ವಾಹನ ಸವಾರರಿಗೆ ಭಯ ಹುಟ್ಟಿಸಿದ್ದ, ಕಾಡಾನೆಯನ್ನು ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.

ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಪುಂಡಾಟ ಮೆರೆಯುತ್ತಿದ್ದ, ಅಂದಾಜು 40 ವರ್ಷದ ಕಾಜೂರು ಕರ್ಣ ಎಂಬ ಕಾಡಾನೆಯನ್ನು ಅರಣ್ಯ ಇಲಾಖೆಯವರು ಸೆರೆಹಿಡಿದಿದ್ದಾರೆ.

ಕಾಡಾನೆ ಸೆರೆ ಹಿಡಿಯುವಂತೆ ಸ್ಥಳೀಯರು ಒತ್ತಾಯಿಸಿದ ಹಿನ್ನೆಲೆ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ ಕಾಡಾನೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ,

ಸಾಕಾನೆ ಶಿಬಿರದ ಆನೆಗಳು ಹಾಗೂ 30ಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ರು. ಕಾಡಾನೆ ಸೆರೆಯಾಗುತ್ತಿದ್ದಂತೆ ಸ್ಥಳಕ್ಕೆ ಶಾಸಕ ಡಾ.ಮಂತರ್ ಗೌಡ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಅಭಿನಂದಿಸಿದರು.

Edited By : Vinayak Patil
PublicNext

PublicNext

01/02/2025 05:03 pm

Cinque Terre

8.7 K

Cinque Terre

0

ಸಂಬಂಧಿತ ಸುದ್ದಿ