ಬೇಲೂರು : ಆಕಸ್ಮಿಕ ಬೆಂಕಿ ತಗುಲಿ ಎರಡು ಗೂಡ್ಸ್ ಲಾರಿಗಳು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಹಾಸನ ಜಿಲ್ಲೆ, ಬೇಲೂರು ಪಟ್ಟಣದ ನೆಹರೂ ನಗರದಲ್ಲಿ ನಡೆದಿದೆ.
ಬೇಲೂರಿನ ತಹಸೀಲ್ದಾರ್ ಕಚೇರಿ ಹಿಂಭಾಗವಿರುವ ಖಾಸಗಿ ಶಾಲೆ ಆವರಣದಲ್ಲಿ ನಿಲ್ಲಿಸಿದ್ದ ಎರಡು ಗೂಡ್ಸ್ ಲಾರಿಗಳಿಗೆ ಆಕಸ್ಮಿಕ ಬೆಂಕಿ ತಗುಲಿ ಸುಟ್ಟು ಹೋಗಿವೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರಾದರೂ ಅಷ್ಟರಲ್ಲಾಗಲೇ ಗೂಡ್ಸ್ ಲಾರಿಗಳು ಸುಟ್ಟು ಹೋಗಿದ್ದವು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಬೇಲೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
PublicNext
01/02/2025 05:43 pm