ಬೀದರ್ : ಬಜೆಟ್‍ನಲ್ಲಿ ಜನಸಾಮಾನ್ಯರ ಬದುಕು ಬದಲಾಯಿಸುವಂಥ ಯಾವುದೇ ಯೋಜನೆ ಇಲ್ಲ. ಈ ಬಜೆಟ್ ನಿರಾಶಾದಾಯಕವಾಗಿದೆ ಎಂದು ವಿಧಾನ
ಪರಿಷತ್ ಮಾಜಿ ಸದಸ್ಯ ವಿಜಯಸಿಂಗ್ ಟೀಕಿಸಿದ್ದಾರೆ.
ಕೇಂದ್ರದ ಬಿಜೆಪಿ ಸರ್ಕಾರವು 2025-26ನೇ ಸಾಲಿನ ಬಜೆಟ್‍ನಲ್ಲಿ ಕೆಲ ರಿಯಾಯಿತಿಗಳನ್ನು ಪ್ರಕಟಿಸಿ ಜನರ ಮೂಗಿಗೆ ತುಪ್ಪ ಸವರುವ ಯತ್ನ ಮಾಡಿದೆ. ಯುವಜನರನ್ನು ನಿರುದ್ಯೋಗ ಸಮಸ್ಯೆ ಬಹುವಾಗಿ ಕಾಡುತ್ತಿದೆ. ಆದರೆ, ಆ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್‍ನಲ್ಲಿ ಯಾವುದೇ ಪ್ರಸ್ತಾಪ ಮಾಡಿಲ್ಲ ಎಂದು ಕಿಡಿ ಕಾರಿದ್ದಾರೆ.
ಯುವಕರು, ಮಹಿಳೆಯರು, ಬಡವರು ಹಾಗೂ ರೈತರ ಬಾಳು ಹಸನಾಗಿಸುವ ಮಹತ್ವದ ಯೋಜನೆ ಈ ಯೋಜನೆಗಳಲ್ಲಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.
ತೆರಿಗೆ ಕಡಿತ ಮಾಡಿದ್ದಕ್ಕೆ ಬಿಜೆಪಿಯವರು ಚಪ್ಪಾಳೆ ತಟ್ಟಿದ್ದಾರೆ. ಆದರೆ, ಸಂಬಳ ಇದ್ದವರಿಗಷ್ಟೇ ಅದರ ಲಾಭ
ಸಿಗಲಿದೆ. ಉದ್ಯೋಗವೇ ಇಲ್ಲದವರಿಗೆ ಸಂಬಳ ಎಲ್ಲಿಂದ ಬರುತ್ತದೆ. ತೆರಿಗೆ ವಿನಾಯಿತಿ ಹೇಗೆ ಸಿಗುತ್ತದೆ ಎಂದು ಪ್ರಶ್ನಿಸಿದ್ದಾರೆ.
PublicNext
01/02/2025 06:29 pm