", "articleSection": "Cultural Activity,Public News", "image": { "@type": "ImageObject", "url": "https://prod.cdn.publicnext.com/s3fs-public/39640520250201065150filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SundarChamarajnagar" }, "editor": { "@type": "Person", "name": "112068327297121593490" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಾಮರಾಜನಗರ : ಬಸವಣ್ಣನವರ ಅನುಭವ ಮಂಟಪದಲ್ಲಿದ್ದ ಶಿವಶರಣರಲ್ಲಿ ಮಡಿವಾಳ ಮಾಚಯ್ಯ ಅವರು ಅತ್ಯಂತ ಶ್ರೇಷ್ಠ ವಚನಕಾರರಾಗಿದ್ದಾರೆ ಎಂದು ಎಂ.ಎಸ್.ಐ.ಎಲ...Read more" } ", "keywords": "Node,Chamarajnagar,Public-News,Cultural-Activity", "url": "https://publicnext.com/node" } ಚಾಮರಾಜನಗರ: ಮಡಿವಾಳ ಮಾಚಿದೇವರು ಶಿವಶರಣರಲ್ಲಿ ಶ್ರೇಷ್ಠ ವಚನಕಾರರು
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಾಮರಾಜನಗರ: ಮಡಿವಾಳ ಮಾಚಿದೇವರು ಶಿವಶರಣರಲ್ಲಿ ಶ್ರೇಷ್ಠ ವಚನಕಾರರು

ಚಾಮರಾಜನಗರ : ಬಸವಣ್ಣನವರ ಅನುಭವ ಮಂಟಪದಲ್ಲಿದ್ದ ಶಿವಶರಣರಲ್ಲಿ ಮಡಿವಾಳ ಮಾಚಯ್ಯ ಅವರು ಅತ್ಯಂತ ಶ್ರೇಷ್ಠ ವಚನಕಾರರಾಗಿದ್ದಾರೆ ಎಂದು ಎಂ.ಎಸ್.ಐ.ಎಲ್ ಅಧ್ಯಕ್ಷ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಸರಳವಾಗಿ ಆಯೋಜಿಸಲಾಗಿದ್ದ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಡಿವಾಳ ಮಾಚಿದೇವ ಅವರು ಕಾಯಕದಲ್ಲಿ ನಿಷ್ಠೆಯುಳ್ಳ ಶಿವಶರಣರ ಮೈಲಿಗೆ ಬಟ್ಟೆಗಳನ್ನು ಮಡಿ ಮಾಡಿ ಅವರಿಗೆ ತಲುಪಿಸುವ ಕಾಯಕ ಮಾಡುತ್ತಿದ್ದರು. ಮಡಿ ಬಟ್ಟೆ ಹೊತ್ತುಕೊಂಡು ವೀರಗಂಟೆ ಬಾರಿಸುತ್ತಾ ಭಕ್ತರಲ್ಲದವರು ತಮ್ಮನ್ನು ಮುಟ್ಟಬಾರದೆಂಬ ನಿಯಮವನ್ನು ವಿಧಿಸಿಕೊಂಡಿದ್ದ ನೇರ ಹಾಗೂ ನಿಷ್ಟೂರವಾದಿ ಮಾಚಿದೇವರು. ಅವರ ಆದರ್ಶ ಮೌಲ್ಯಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಅನುಭವ ಮಂಟಪ ಕಟ್ಟುವಲ್ಲಿ ಮಾಚಿದೇವರ ಕಾಯಕ ಅತಿ ಮಹತ್ವದ್ದಾಗಿದೆ. ದೇಶದ ವಿವಿಧ ಭಾಗಗಳಿಂದ ಕಲ್ಯಾಣಕ್ಕೆ ಬರುವವರನ್ನು ಪರಿಕ್ಷೀಸಿ ಮಡಿ ಹಾಸಿ ಸ್ವಾಗತಿಸುವ ಜವಾಬ್ದಾರಿಯುತ ಕೆಲಸ ನಿರ್ವಹಿಸುತ್ತಿದ್ದರು. ಮಾಚಿದೇವರ ಪರೀಕ್ಷೆಗೆ ಒಳಪಡದ ಹೊರತು ಕಲ್ಯಾಣಪುರ ಪ್ರವೇಶದ ಪ್ರಮಾಣ ಪತ್ರ ಹೊರಗಿನಿಂದ ಬರುವವರಿಗೆ ಸಿಗುತ್ತಿರಲಿಲ್ಲ

Edited By : PublicNext Desk
Kshetra Samachara

Kshetra Samachara

01/02/2025 06:49 pm

Cinque Terre

180

Cinque Terre

0

ಸಂಬಂಧಿತ ಸುದ್ದಿ