ಹಾಸನ :ಸುತ್ತಮುತ್ತಲ ಗ್ರಾಮಸ್ಥರಿಗೆ ರಸ್ತೆ ಹಾಗೂ ಮೂಲಭೂತ ಸೌಕರ್ಯ ಕಲ್ಪಿಸಿ ವಿಮಾನ ನಿಲ್ದಾಣ ಕಾಮಗಾರಿ ಮಾಡಬೇಕು ಎಂದು ಆಗ್ರಹಿಸಿ ನಗರದಲ್ಲಿ ಭೂಮಿ ಕಳೆದುಕೊಂಡ ಸಂತ್ರಸ್ಥರು ಪ್ರತಿಭಟನೆ ನಡೆಸಿದರು.
ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಮೆರವಣಿಗೆ ಹೊರಟ ಪ್ರತಿಭಟನಕಾರರು ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಬಂದು ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿ ಬಳಿಕ ತಮ್ಮ ಸಮಸ್ಯೆಗೆ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಈ ವೇಳೆ ಗ್ರಾಮಸ್ಥರು ಮಾತನಾಡಿ, ಭುವನಹಳ್ಳಿ ಬಳಿ ವಿಮಾನ ನಿಲ್ದಾಣ ಮಾಡಲು ನಮ್ಮ ವಿರೋಧ ಇಲ್ಲ, ಆದರೆ ಕಾಮಗಾರಿಗಾಗಿ ಅಲ್ಲಿನ ಜನ ಭೂಮಿ ಪಡೆದುಕೊಂಡಿರುವ ಸರ್ಕಾರ ಹಾಗೂ ಜಿಲ್ಲಾಡಳಿತ ಅವರಿಗೆ ಮೂಲಭೂತ ಸೌಕರ್ಯ ಕಲ್ಪಿಸಬೇಕಾಗಿರುವುದು ಜಿಲ್ಲಾಡಳಿತದ ಅಧ್ಯ ಕರ್ತವ್ಯವಾಗಿದೆ ಎಂದರು.
ಹಲವು ವರ್ಷಗಳಿಂದ ವಿಮಾನ ನಿಲ್ದಾಣದ ಸುತ್ತಮುತ್ತ ಇರುವ ಹತ್ತಾರು ಹಳ್ಳಿಗಳಿಗೆ ರಸ್ತೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಇದೀಗ ಒತ್ತುವರಿ ಮಾಡಲಾಗಿದೆ, ಇದರಿಂದ ಗ್ರಾಮಗಳಿಗೆ ತೆರಳುವ ಜನರು ಸಂಕಷ್ಟ ಎದುರಿಸುವಂತಾಗಿದೆ. ಕೂಡಲೇ ಜಿಲ್ಲಾಡಳಿತ ಈ ಬಗ್ಗೆ ಗಮನಹರಿಸಿ ಪ್ರತ್ಯೇಕ ರಸ್ತೆ ಕಲ್ಪಿಸಿ ಕೊಡಬೇಕು ಎಂದು ಮನವಿ ಮಾಡಿದರು.
ಇದಲ್ಲದೆ ವಿಮಾನ ನಿಲ್ದಾಣಕ್ಕೆ ಭೂಮಿ ಕಳೆದುಕೊಂಡಿರುವ ಅನೇಕ ರೈತರಿಗೆ ಈವರೆಗೂ ಪರಿಹಾರ ಸಿಕ್ಕಿಲ್ಲ, ಕೂಡಲೇ ಭೂ ಸಂತ್ರಸ್ತರಿಗೆ ಪೂರ್ಣ ಪ್ರಮಾಣದ ಅರಿಹಾರ ಕಲ್ಪಿಸಬೇಕು. ಜೊತೆಗೆ ಅಲ್ಪ ಸ್ವಲ್ಪ ಉಳಿಸಿಕೊಂಡಿರುವ ರೈತರಿಗೆ ಜಾಮೀನು ದುರಸ್ತಿ ಮಾಡಿಕೊಡಬೇಕು ಎಂದು ಆಗ್ರಹಿಸಿದರು.
ಮೂಲಭೂತ ಸೌಕರ್ಯ ಕಲ್ಪಿಸುವುದು ಜಿಲ್ಲಾಡಳಿತಕ್ಕೆ ಒಂದೆರಡು ದಿನಗಳ ಕೆಲಸವಾಗಿದೆ, ಆದರೆ ಉದ್ದೇಶಪೂರ್ವಕವಾಗಿ ಅಲ್ಲಿನ ರೈತರನ್ನು ಹೆದರಿಸುವ ಸಲುವಾಗಿ ನೂರಾರು ಜನ ಪೊಲೀಸರನ್ನು ಬಂದ್ರತೆಗೆ ನಿಯೋಜಿಸಿ ಸುತ್ತ ಕಾಂಪೌಂಡ್ ಹಾಕುವ ಮೂಲಕ ನಮ್ಮ ಹೋರಾಟ ಹತ್ತಿಕ್ಕುವ ಹುನ್ನಾರ ನಡೆದಿದೆ. ಈ ಬೆದರಿಕೆಗೆ ಹೆದರುವುದಿಲ್ಲ ನಮ್ಮ ಬೇಡಿಕೆ ಈಡೇರದಿದ್ದರೆ ಮುಂದಿನ ದಿನಗಳಲ್ಲಿ ಬೆಂಗಳೂರಿನ ವರೆಗೂ ಪಾದಯಾತ್ರೆ ಹಾಗೂ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು
Kshetra Samachara
01/02/2025 07:05 pm