ಹಾಸನ ಸುಮಾರು 34.50 ಲಕ್ಷಗಳ ಅನುದಾನದಲ್ಲಿ ನಗರಸಭಾ ವ್ಯಾಪ್ತಿಯ ಎಲ್.ವಿ ಪಾಲಿಟೆಕ್ನಿಕ್ ಇಂದ ಸತ್ಯಮಂಗಲ ಬಡಾವಣೆ ವರೆಗೆ ಕುಡಿಯುವ ನೀರಿನ ಕೊಳವೆ ಮಾರ್ಗವನ್ನು ಅಳವಡಿಸಲು ಕಾಮಗಾರಿಗೆ ಶಾಸಕ ಗುದ್ದಲಿ ಪೂಜೆ ನೆರವೇರಿಸಿದರು.
ಈ ವೇಳೆ ಶಾಸಕ ಸ್ವರೂಪ್ ಪ್ರಕಾಶ್ ಮಾತನಾಡಿ, ಜನರಿಗೆ ಕುಡಿಯುವ ನೀರು ಪೂರೈಸುವ ಸಲುವಾಗಿ ಕೈಗೊಂಡಿರುವ ಕಾಮಗಾರಿ ಇದಾಗಿದ್ದು ಗುಣಮಟ್ಟದ ಕಾಮಗಾರಿ ಮಾಡಬೇಕು ಎಂದು ಸಂಭಂದಿಸಿದ ಗುತ್ತಿಗೆದಾರರಿಗೆ ಸೂಚನೆ ನೀಡಿದರು
ಅತೀ ಶೀಘ್ರವಾಗಿ ಕಾಮಗಾರಿ ಮುಗಿಸಿ ಜನರಿಗೆ ಅನುಕೂಲ ಕಲ್ಪಿಸಬೇಕು ಎಂದರು. ಈ ವೇಳೆ ಸಂಬಂಧಪಟ್ಟ ಅಧಿಕಾರಿಗಳು, ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಚುನಾಯಿತ ಸದಸ್ಯರುಗಳು, ಪಕ್ಷದ ಮುಖಂಡರುಗಳು, ಕಾರ್ಯಕರ್ತರು, ಹಿರಿಯರು, ಸ್ಥಳೀಯರು, ಸಾರ್ವಜನಿಕರು ಉಪಸ್ಥಿತರಿದ್ದರು
Kshetra Samachara
01/02/2025 07:14 pm