ಬೆಳಗಾವಿ: ಖಾಸಗಿ ಕಾರ್ಖಾನೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದ್ದು, ದೊಡ್ಡ ಅನಾಹುತ ಸ್ವಲ್ಪದರಲ್ಲೇ ತಪ್ಪಿದೆ.
ಬೆಳಗಾವಿ ತಾಲೂಕಿನ ದೇಸೂರು ಕ್ರಾಸ್ ಬಳಿ ಇರುವ ಅಲ್ಮಾ ಮೋಟಾರ್ಸ್ ಕಾರ್ಖಾನೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಹೊತ್ತಿಕೊಂಡಿರುವ ಮಾಹಿತಿ ತಿಳಿಯುತ್ತಿದಂತೆ ಮೂರು ಅಗ್ನಿಶಾಮಕ ವಾಹನ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಈ ಕಾರ್ಖಾನೆಯಲ್ಲಿ ಬಸ್ ನ ಬಿಡಿ ಭಾಗ ತಯಾರಿಕೆ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ.
PublicNext
01/02/2025 07:27 pm