ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಡಿವಾಳ ಮಾಚಿದೇವರ ಜಯಂತಿ ಮೆರವಣಿಗೆಗೆ ಶಾಸಕ ಸ್ವರೂಪ್ ಪ್ರಕಾಶ್ ಚಾಲನೆ

ಹಾಸನ: ಮಡಿವಾಳ ಮಾಚಿದೇವರ ಜಯಂತಿ ಅಂಗವಾಗಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಆಯಾ ಆಯೋಜಿಸಲಾಗಿದ್ದ ಮೆರವಣಿಗೆಗೆ ಶಾಸಕ ಸ್ವರೂಪ್ ಪ್ರಕಾಶ್ ಚಾಲನೆ ನೀಡಿದರು.

ಅಲಂಕೃತ ಬೆಳ್ಳಿ ರಥದಲ್ಲಿ ಇರಿಸಲಾಗಿದ್ದ ಮಾಚಿದೇವರ ಭಾವಚಿತ್ರಕ್ಕೆ ಶಾಸಕ ಸ್ವರೂಪ್ ಪ್ರಕಾಶ್ ಹಾಗೂ ಅಪರ ಜಿಲ್ಲಾಧಿಕಾರಿ ಕೆ.ಟಿ ಶಾಂತಲಾ ಪುಷ್ಪಾರ್ಚನೆ ಮಾಡುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.

ಬಳಿಕ ವಿವಿಧ ಕಲಾಠಂಡಗಳೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸದ ಮೆರವಣಿಗೆಯಲ್ಲಿ ಸಮುದಾಯದ ಮುಖಂಡರು ಹಾಗೂ ಅಧಿಕಾರಿಗಳು ಭಾಗವಹಿಸಿ ಗಮನಸೆಳೆದರು.

ಬಳಿಕ ಶಾಸಕ ಸ್ವರೂಪ್ ಪ್ರಕಾಶ್ ಮಾತನಾಡಿ, ಸಮ ಸಮಾಜ ನಿರ್ಮಾಣಕ್ಕೆ ಮಡಿವಾಳ ಮಾಚಿದೇವರ ಕೊಡುಗೆ ಅಪಾರ, ಅವರು ಹಾಕಿಕೊಟ್ಟ ದಾರಿಯಲ್ಲಿ

ಎಲ್ಲರೂ ನಡೆಯೋಣ ಎಂದರು.

ಪ್ರತಿಯೊಂದು ಸಮಾಜಗಳು ತಮ್ಮ ವೃತ್ತಿ ವೈಶಿಷ್ಟ್ಯಗಳ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ. ಅದರಂತೆ ಮಡಿವಾಳ ಸಮಾಜವೂ ತಮ್ಮ ವೃತ್ತಿ ವೈಶಿಷ್ಟ್ಯದ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ. ಆದರೆ ಸಮುದಾಯ ತಮ್ಮ ಹಕ್ಕು ಬಾಧ್ಯತೆಗಳಿಗಾಗಿ ಇನ್ನು ಒಗ್ಗಟ್ಟಾಗಿ ಕೆಲಸ ಮಾಡುವ ಅಗತ್ಯ ಇದೆ ಎಂದರು

Edited By : PublicNext Desk
Kshetra Samachara

Kshetra Samachara

01/02/2025 07:37 pm

Cinque Terre

580

Cinque Terre

0

ಸಂಬಂಧಿತ ಸುದ್ದಿ