ಎಬಿವಿಪಿಯ 44ನೇ ಪ್ರಾಂತ ಸಮ್ಮೇಳನದ ಶೋಭಾ ಯಾತ್ರೆ
ಶಿವಮೊಗ್ಗ : ಶಿವಮೊಗ್ಗ ನಗರದ ಅಲ್ಲಮ ಪ್ರಭು ಮೈದಾನದಲ್ಲಿ ಮೂರು ದಿನಗಳ ಕಾಲ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತ್ಯದ 44ನೇ ಪ್ರಾಂತ್ಯ ಸಮ್ಮೇಳನ ಕಾರ್ಯಕ್ರಮ ನಡೆಯುತ್ತಿದ್ದು ಈ ಹಿನ್ನೆಲೆ ಶನಿವಾರ ಶೋಭಾ ಯಾತ್ರೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಶೋಭಾ ಯಾತ್ರೆ ಕಾರ್ಯಕ್ರಮಕ್ಕೆ ವಿದ್ಯಾರ್ಥಿ ಪರಿಷತ್ ರಾಷ್ಟ್ರೀಯ ಕಾರ್ಯದರ್ಶಿಗಳಾದ ಕುಮಾರಿ ಶಾಲಿನಿ ವರ್ಮ ಚಾಲನೆಯನ್ನು ನೀಡಿದರು. ಈ ಶೋಭಾ ಯಾತ್ರೆಯೂ ಶಿವಮೊಗ್ಗ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿ ವಾಸವಿ ಶಾಲಾ ಮೈದಾನದಲ್ಲಿ ಮುಕ್ತಾಯಗೊಳ್ತು.
Kshetra Samachara
01/02/2025 09:13 pm