ಮುಂಡಗೋಡ: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಸಾಲಗಾಂವ ಗ್ರಾಮದ ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಸಾಲಗಾಂವ ಗ್ರಾಮದ ಗುಡ್ಡಪ್ಪ ಜಾಡರ (57) ಎಂಬವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಮೀನು ಹಿಡಿಯುತ್ತಿದ್ದ ಸಂದರ್ಭ ಗುಡ್ಡಪ್ಪ ಅವರ ಕಾಲಿಗೆ ಕಾಂಜಿ ಕಸ ಸುತ್ತಿಕೊಂಡಿದ್ದು, ಈಜಲಾಗದೆ ಮೃತಪಟ್ಟಿದ್ದಾರೆ. ಸಾರ್ವಜನಿಕರು ಮೃತದೇಹ ತೇಲುತ್ತಿರುವುದನ್ನು ನೋಡಿ ಪೊಲೀಸ್ರಿಗೆ ಕರೆ ಮಾಡಿದ್ದಾರೆ. ಪೊಲೀಸರು ಕಾರ್ಯಾಚರಣೆ ನಡೆಸಿ ಶವ ಹೊರತೆಗೆದಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ಸಂಭವಿಸಿದೆ.
PublicNext
01/02/2025 10:37 pm