ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಬಳ್ಳಾಪುರ: ಜೆಡಿಎಸ್ ಕಾರ್ಯಕರ್ತರ ಮಗನ ಮದುವೆಯಲ್ಲಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಭಾಗಿ

ಚಿಕ್ಕಬಳ್ಳಾಪುರ: ಮಾಜಿ ಮುಖ್ಯಮಂತ್ರಿಗಳು ಹಾಗೂ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಶನಿವಾರ ರಾತ್ರಿ ಖಾಸಗಿ ಕಾರ್ಯಕ್ರಮದ ನಿಮಿತ್ತ ಶಿಡ್ಲಘಟ್ಟಕ್ಕೆ ಆಗಮಿಸಿದ್ದರು.

ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮುಖಂಡರ ಮಗನ ಮದುವೆಯಲ್ಲಿ ಭಾಗಿಯಾಗಿ ವಧು ವರರಿಗೆ ಆಶೀರ್ವದಿಸಿದರು. ಇನ್ನು ಮಾಜಿ ಮುಖ್ಯಮಂತ್ರಿಗಳು ಹಾಗೂ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಶಿಡ್ಲಘಟ್ಟಕ್ಕೆ ಆಗಮಿಸುತ್ತಿದ್ದಂತೆ ಜೆಡಿಎಸ್ ಮುಖಂಡರು ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸೆಲ್ಫಿಗಾಗಿ ಮುಗಿಬಿದ್ದರು. ಇನ್ನು ಜೆಡಿಎಸ್ ಕಾರ್ಯಕರ್ತರ ಮಗನ ಮದುವೆಗೆ ಶಿಡ್ಲಘಟ್ಟ ತಾಲೂಕಿನ ಜೆಡಿಎಸ್ ಶಾಸಕ ಬಿ ಎನ್ ರವಿಕುಮಾರ್, ಪಿ ಎಲ್ ಡಿ ಬ್ಯಾಂಕ್ ಅಧ್ಯಕ್ಷ ಬಂಕ್ ಮುನಿಯಪ್ಪ ತಾದುೂರು ರಘು ಬಿಜೆಪಿ ಪಕ್ಷದ ಮುಖಂಡರು ಪಾಲ್ಗೊಂಡಿದ್ದರು.

ರೈತರಿಗೆ, ಬಡವರಿಗೆ,ವಿದ್ಯಾರ್ಥಿಗಳಿಗೆ ಹಾಗೂ ಹಲವಾರು ರೀತಿಯ ಎಂಪ್ಲಾಯ್ ಮೆಂಟ್ ಜನರೇಷನ್ ಗೆ ಇರಬಹುದು, ದುಡಿಮೆಗೆ ಇರಬಹುದು ಒಟ್ಟಾರೆ ಬಜೆಟ್ ದೇಶದ ಸಮಗ್ರ ಅಭಿವೃದ್ಧಿಗೆ ಸೂಕ್ತವಾದ ಬಜೆಟ್ ಎಂದರು.

Edited By : Vijay Kumar
PublicNext

PublicNext

01/02/2025 11:16 pm

Cinque Terre

20.92 K

Cinque Terre

0