", "articleSection": "Education,Government", "image": { "@type": "ImageObject", "url": "https://prod.cdn.publicnext.com/s3fs-public/38659820250202082907filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "KumarTumakur" }, "editor": { "@type": "Person", "name": "9844461373" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ತುಮಕೂರು: ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಶಿಕ್ಷಣ ಇಲಾಖೆಯಲ್ಲಿ ಖಾಲಿಯಿದ್ದ 13,500 ಶಾಲಾ ಶಿಕ್ಷಕರ ನೇಮಕಾತಿ ಮಾಡಲಾಗಿದೆಯಲ್ಲದೆ ಹೊಸದಾಗಿ...Read more" } ", "keywords": "Karnataka teacher recruitment, 15000 teacher vacancies, Madhu Bangarappa, Karnataka education department, teacher hiring process, Karnataka government jobs, education news Karnataka, teacher employment. ,Tumkur,Education,Government", "url": "https://publicnext.com/node" }
ತುಮಕೂರು: ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಶಿಕ್ಷಣ ಇಲಾಖೆಯಲ್ಲಿ ಖಾಲಿಯಿದ್ದ 13,500 ಶಾಲಾ ಶಿಕ್ಷಕರ ನೇಮಕಾತಿ ಮಾಡಲಾಗಿದೆಯಲ್ಲದೆ ಹೊಸದಾಗಿ 15,000 ಶಾಲಾ ಶಿಕ್ಷಕರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎನ್. ಮಧು ಬಂಗಾರಪ್ಪ ತಿಳಿಸಿದರು.
ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಿಕ್ಷಕರ ಕೊರತೆ ನೀಗಿಸಲು ಹೊಸದಾಗಿ ಶಿಕ್ಷಕರ ನೇಮಕಾತಿಗೆ ಸರ್ಕಾರ ಮುಂದಾಗಿದೆ. ಖಾಲಿಯಿರುವ ಶಿಕ್ಷಕರ ಹುದ್ದೆಗಳನ್ನು ಹಂತ-ಹಂತವಾಗಿ ಭರ್ತಿ ಮಾಡಲು ಕ್ರಮಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಸರ್ಕಾರಿ ಶಾಲೆಗಳಲ್ಲಿ ಕ್ಷೀಣಿಸುತ್ತಿರುವ ಮಕ್ಕಳ ಸಂಖ್ಯೆ ಹೆಚ್ಚಿಸಲು ಹಲವಾರು ವಿನೂತನ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಕ್ಕೆ ತರಲಾಗಿದೆ. ಶಾಲೆಗಳಲ್ಲಿದ್ದ ನ್ಯೂನ್ಯತೆಗಳನ್ನು ಸರಿಪಡಿಸಲಾಗಿದೆ. ಶಾಲೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ವಿಜ್ಞಾನ ಲ್ಯಾಬ್‌ಗಳನ್ನು ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು.
ಸರ್ಕಾರಿ ಶಾಲೆಗಳಲ್ಲಿ ಖಾಲಿಯಿರುವ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು. ಇದರಿಂದ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತದೆ. ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ನೀಡಲು ಮಧ್ಯಾಹ್ನದ ಬಿಸಿಯೂಟ, ಉಚಿತ ಸಮವಸ್ತ್ರ, ಪುಸ್ತಕ, ಶೂ, ಮತ್ತಿತರ ಸೌಲಭ್ಯಗಳನ್ನು ನೀಡಲಾಗುತ್ತಿದೆಯಲ್ಲದೆ ಈಗಿರುವ ಶಾಲೆಗಳನ್ನು ಕೆಪಿಎನ್ ಶಾಲೆಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು. ಇದರಿಂದ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲು ಆಸಕ್ತಿ ತೋರುತ್ತಿದ್ದಾರೆ ಎಂದರು.
ಪ್ರಸಕ್ತ ವರ್ಷದಲ್ಲಿ ಪದವಿಪೂರ್ವ ಕಾಲೇಜುಗಳನ್ನೂ ಸಹ ಮೇಲ್ದರ್ಜೆಗೇರಿಸಲು ಕ್ರಮಕೈಗೊಳ್ಳಲಾಗುತ್ತಿದೆ. ಪದವಿಪೂರ್ವ ಕಾಲೇಜುಗಳಿಗೂ ಅತಿಥಿ ಉಪನ್ಯಾಸಕರ ನೇಮಕಕ್ಕೆ ಕ್ರಮವಹಿಸಲಾಗುವುದೆಂದರು.
ಜಿಲ್ಲೆಯಲ್ಲಿ ಶತಮಾನ ಕಂಡ ಶಾಲೆಗಳನ್ನೂ ಸಹ ಅಭಿವೃದ್ಧಿಪಡಿಸಲಾಗುವುದು. ವಿಶೇಷ ಅನುದಾನದಡಿ ಶತಮಾನ ಕಂಡ ಶಾಲೆಗಳು ಮುಂದಿನ ಪೀಳಿಗೆಗೆ ಮಾದರಿಯಾಗುವಂತೆ ಉಳಿಸಿಕೊಂಡು ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದರು.
“ನಮ್ಮ ಶಾಲೆ ನಮ್ಮ ಜವಾಬ್ದಾರಿ” ಕಾರ್ಯಕ್ರಮದಡಿ ತಾವು ಓದಿದ ಶಾಲೆಗಳ ಅಭಿವೃದ್ಧಿಗೆ ಹಲವಾರು ದಾನಿಗಳು ಆರ್ಥಿಕ ನೆರವು ನೀಡಲು ಮುಂದೆ ಬರುತ್ತಿದ್ದಾರೆ. ಶಾಲಾ ಪೀಠೋಪಕರಣ, ಲೇಖನ ಸಾಮಗ್ರಿ, ಸ್ಮಾರ್ಟ್ ತರಗತಿ ನಿರ್ಮಾಣಕ್ಕೆ ಸಹಾಯಹಸ್ತ ನೀಡುತ್ತಿದ್ದಾರೆ. ಅಲ್ಲದೆ ಈ ಕಾರ್ಯಕ್ರಮಕ್ಕೆ ಸಿಎಸ್‌ಆರ್ ನಿಧಿಯಿಂದ 1591 ಕೋಟಿ ರೂ.ಗಳನ್ನು ಸದ್ವಿನಿಯೋಗಿಸಲಾಗುತ್ತಿದೆ. ಜನಪ್ರತಿನಿಧಿಗಳು, ಅಧಿಕಾರಿಗಳೂ ಸಹ ತಾವು ಓದಿದ ಶಾಲೆಗಳ ಅಭಿವೃದ್ಧಿಗಾಗಿ ಕೊಡುಗೆಯನ್ನು ನೀಡಲು ಸಂಕಲ್ಪ ಮಾಡಬೇಕು ಎಂದು ತಿಳಿಸಿದರು.
ಜಿಲ್ಲೆಯು ಎಸ್.ಎಸ್.ಎಲ್.ಸಿ. ಫಲಿತಾಂಶದಲ್ಲಿ ಹಿಂದುಳಿದಿದ್ದು, ಫಲಿತಾಂಶದ ಶೇಕಡಾ ಪ್ರಮಾಣವನ್ನು ಉನ್ನತ ಮಟ್ಟಕ್ಕೆ ಏರಿಸಲು ಶಿಕ್ಷಕರು, ಅಧಿಕಾರಿಗಳು ಶ್ರಮಿಸಬೇಕೆಂದು ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಶಾಲೆ ಹಾಗೂ ಶಿಕ್ಷಕರ ಕಾರ್ಯಕ್ಷಮತೆ ಹೆಚ್ಚಿಸುವ, ಅನುಭವಾತ್ಮಕ ಕಲಿಕೆಗಾಗಿ ರೂಪಿಸಿರುವ ವಿನೂತನ ಕಾರ್ಯಕ್ರಮಗಳ ಮೂಲಕ ಜಿಲ್ಲೆಯು ಇತರ ಜಿಲ್ಲೆಗಳಿಗೆ ಮಾದರಿಯಾಗಿದೆ. ಈ ಕಾರ್ಯಕ್ರಮಗಳನ್ನು ಇತರೆ ಜಿಲ್ಲೆಗಳಿಗೆ ವಿನೂತನ ಕಾರ್ಯಕ್ರಮಗಳನ್ನು ವಿಸ್ತರಿಸಲಾಗುವುದೆಂದರು.
ರಾಜ್ಯದಲ್ಲಿ ಇಂಗ್ಲೀಷ್ ಮಾಧ್ಯಮದ ಶಾಲೆಗಳಿಗೆ ಹೆಚ್ಚಿನ ಬೇಡಿಕೆ ಇರುವುದರಿಂದ ದ್ವಿಭಾಷಾ ಶಾಲೆಗಳನ್ನು ತೆರೆಯಲಾಗುವುದು. ಈಗಿರುವ ಕನ್ನಡ ಮಾಧ್ಯಮದ ಶಾಲೆಗಳು ದ್ವಿಭಾಷಾ ಶಾಲೆಗಳನ್ನಾಗಿ ಮಾರ್ಪಡಿಸಲಾಗುವುದು ಎಂದು ಹೇಳಿದರು.
ಇದಕ್ಕೂ ಮುನ್ನ ನಡೆದ ಇಲಾಖಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮಾತನಾಡಿ, ತುಮಕೂರು ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಗಳ ಪ್ರಗತಿ ಮಾಹಿತಿಯನ್ನು ಸಚಿವರಿಗೆ ತಿಳಿಸುತ್ತಾ, ಜಿಲ್ಲೆಯಲ್ಲಿ ಸರ್ಕಾರಿ, ಅನುದಾನಿತ ಹಾಗೂ ವಸತಿ ಶಾಲೆ ಸೇರಿದಂತೆ ಒಟ್ಟು 3873 ಶಾಲೆಗಳಿದ್ದು, 2,10,183 ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ ಎಂದು ತಿಳಿಸಿದರಲ್ಲದೆ, ಜಿಲ್ಲೆಗೆ ಮಂಜೂರಾದ ಶಿಕ್ಷಕರ, ಕಾರ್ಯನಿರ್ವಹಿಸುತ್ತಿರುವ ಹಾಗೂ ಖಾಲಿ ಹುದ್ದೆಗಳ ಅಂಕಿ-ಅಂಶಗಳ ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ 435 ಶಾಲೆಗಳಿಗೆ ಆವರಣಗೋಡೆ, 550 ಶೌಚಾಲಯ, 247 ಶಾಲಾ ಆಟದ ಮೈದಾನಗಳನ್ನು ನಿರ್ಮಿಸಲಾಗಿದ್ದು, 1347 ನಿರ್ಮಾಣ ಕಾಮಗಾರಿಗಳು ಪ್ರಗತಿಯಲ್ಲಿವೆ. ಜಿಲ್ಲೆಯಲ್ಲಿ 2024-25ನೇ ಸಾಲಿನಲ್ಲಿ 479 ಹೊಸ ಶಾಲಾ ಕೊಠಡಿಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದ್ದು, ಸರ್ಕಾರದಿಂದ 71 ಕೋಟಿ ರೂ.ಗಳ ಅನುದಾನವನ್ನು ನಿರೀಕ್ಷಿಸಲಾಗಿದೆ ಎಂದು ಸಚಿವರ ಗಮನಕ್ಕೆ ತಂದರು.
ನರೇಗಾ ಯೋಜನೆಯಡಿ ಶಾಲೆಗಳಲ್ಲಿ ವಿದ್ಯಾರ್ಥಿನಿಯರಿಗಾಗಿ ಗುಲಾಬಿ ಬಣ್ಣದ ಹಾಗೂ ವಿದ್ಯಾರ್ಥಿಗಳಿಗಾಗಿ ನೀಲಿ ಬಣ್ಣದ ಪ್ರತ್ಯೇಕ ಶೌಚಾಲಯಗಳನ್ನು ನಿರ್ಮಾಣ ಮಾಡಿ 24*7 ನೀರು ಪೂರೈಕೆ ಇರುವಂತೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಶಾಸಕ ಸುರೇಶ್ ಗೌಡ, ಡಿಡಿಪಿಐಗಳಾದ ಮನಮೋಹನ ಹಾಗೂ ಗಿರಿಜಾ, ಡಯಟ್ ಪ್ರಾಂಶುಪಾಲ ಮಂಜುನಾಥ, ಡಿಡಿಪಿಯು ಬಾಲಗುರುಮೂರ್ತಿ ಸೇರಿದಂತೆ ಮತ್ತಿತರರು ಹಾಜರಿದ್ದರು.
PublicNext
02/02/2025 08:29 am