", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/222042-1738473479-Add-a-heading---2025-02-02T104749.142.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ShirahattiGowrish" }, "editor": { "@type": "Person", "name": "Vijay.Kumar" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಗದಗ: ಗದಗ ತಾಲೂಕಿನ ಅಡವಿ ಸೋಮಾಪುರ ಗ್ರಾಮದ ಬಳಿ ಇಂದು ಮುಂಜಾನೆ ಸರಕಾರಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸವಾರ ಸ್ಥಳದಲ್ಲೇ ...Read more" } ", "keywords": "Gadag accident, bike accident, fatal accident, road mishap, Karnataka road accident, Gadag news, bike rider killed. ,Gadag,Accident", "url": "https://publicnext.com/node" }
ಗದಗ: ಗದಗ ತಾಲೂಕಿನ ಅಡವಿ ಸೋಮಾಪುರ ಗ್ರಾಮದ ಬಳಿ ಇಂದು ಮುಂಜಾನೆ ಸರಕಾರಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಜರುಗಿದೆ.
ಗದಗ ನಗರದಿಂದ ಮುಂಡರಗಿ ಪಟ್ಟಣಕ್ಕೆ ಸಂಚರಿಸುತ್ತಿದ್ದ ಮುಂಡರಗಿ ಸಾರಿಗೆ ಘಟಕದ ಕೆಎ-26 ಎಫ್-1100 ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಈ ಅಪಘಾತದಲ್ಲಿ ಮೃತಪಟ್ಟಿರುವ ಸವಾರನು ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಮಾದಿಗನೂರು ಗ್ರಾಮದ ವಸಂತ್ ತಂದೆ ವಿರೇಶ್ ಮುಳವಾರ (ವಯಸ್ಸು 19) ಎಂದು ತಿಳಿದು ಬಂದಿದೆ.
ಮೃತ ದುರ್ದೈವಿ ಯುವಕ ವಸಂತನು ಸುಜಲಾನ್ ವಿಂಡ್ ಪವರ್ ಕಂಪನಿ ಡಂಬಳದಲ್ಲಿ ಖಾಸಗಿ ಉದ್ಯೋಗಿಯಾಗಿ ಕೆಲಸ ಮಾಡುತ್ತಿದ್ದನು ಎಂದು ಮಾಹಿತಿ ಲಭ್ಯವಾಗಿದೆ. ಸುದ್ದಿ ತಿಳಿದು ಘಟನೆಯ ಸ್ಥಳಕ್ಕೆ ಸಂಚಾರಿ ಗಸ್ತು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವರದಿ: ಗೌರೀಶ ನಾಗಶೆಟ್ಟಿ ಪಬ್ಲಿಕ್ ನೆಕ್ಸ್ಟ್ ಗದಗ
PublicNext
02/02/2025 10:49 am