ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯಲ್ಲಾಪುರ : ಕಾರಿಗೆ ಬೈಕ್ ಡಿಕ್ಕಿ - ಸವಾರನಿಗೆ ಗಾಯ

ಯಲ್ಲಾಪುರ : ಅತೀ ವೇಗ ಹಾಗೂ ನಿಷ್ಕಾಳಜಿಯಿಂದ ಚಲಾಯಿಸಿಕೊಂಡುಬಂದ ಬೈಕ್ ಕಾರಿಗೆ ಡಿಕ್ಕಿಹೊಡೆದ ಪರಿಣಾಮ ಬೈಕ್ ಸವಾರನು ಗಾಯಗೊಂಡ ಘಟನೆ ಯಲ್ಲಾಪುರ ತಾಲೂಕಿನ ಕಿರವತ್ತಿಯ ಅರಣ್ಯ ಇಲಾಖೆಯ ಚೆಕ್‌ಪೋಸ್ಟ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಆರೋಪಿ ಬೈಕ್ ಸವಾರ ಬಾಗಲಕೋಟೆ ಜಿಲ್ಲೆಯ ಬದಾಮಿಯ ಹಾಡಗಲದ ರಮೇಶ ತಂದೆ ಶಂಕ್ರಪ್ಪ ಜೋಗಿನ್ ಎಂಬಾತ ತನ್ನ ಬೈಕ್ ಅನ್ನು ಯಲ್ಲಾಪುರ ಕಡೆಯಿಂದ ಹುಬ್ಬಳ್ಳಿ ಕಡೆಗೆ ಅತೀ ವೇಗ ಹಾಗೂ ನಿಷ್ಕಾಳಜಿಯಿಂದ ಚಲಾಯಿಸಿಕೊಂಡುಹೋಗಿ, ಕಲಘಟಗಿ ಕಡೆಯಿಂದ ಯಲ್ಲಾಪುರ ಕಡೆಗೆ ಬರುತ್ತಿದ್ದ ಮಹಾರಾಷ್ಟ್ರದ ಮೋಹನ ಆನಂದ ರಾವ್ ಕುರಾಡೆ ಅವರು ಚಲಾಯಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಬೈಕ್ ಸವಾರನಿಗೆ ಗಾಯವಾಗಿದೆ. ಈ ಕುರಿತು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : PublicNext Desk
Kshetra Samachara

Kshetra Samachara

02/02/2025 12:07 pm

Cinque Terre

2.96 K

Cinque Terre

0