ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಎಡಗಾಲಿನ ಮಂಡಿಯಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಗಾದರು.
ತಪಾಸಣೆ ನಡೆಸಿದ ವೈದ್ಯರು ಈ ಹಿಂದೆ ಲೆಗಮೆಂಟ್ ಶಸ್ತ್ರ ಚಿಕಿತ್ಸೆ ನಡೆದ ಜಾಗದ ಮೇಲೆ ಒತ್ತಡ ಬಿದ್ದಿರುವುದರಿಂದ ನೋವು ಕಾಣಿಸಿಕೊಂಡಿದೆ. ಉಳಿದಂತೆ ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿಸಿದ್ದಾರೆ. ಅಲ್ಲದೆ ಎರಡು ದಿನ ಪ್ರಯಾಣ ಮಾಡದೆ ಮನೆಯಲ್ಲೇ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಇಂದಿನ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯನವ ಕಚೇರಿಯಿಂದ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಇಂದು ಸಿಎಂ ಚಿಕ್ಕಬಳ್ಳಾಪುರ ಮತ್ತು ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ಅಭಿನಂದಾನ ಸಮಾರಂಭದಲ್ಲಿ ಭಾಗಿಯಾಗಬೇಕಿತ್ತು. ಮಂಡಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಎಲ್ಲಾ ಕಾರ್ಯಕ್ರಮಗಳನ್ನ ರದ್ದುಗೊಳಿಸಲಾಗಿದೆ.
PublicNext
02/02/2025 12:15 pm