ವಿಜಯಪುರ: ಲೋಕಾಯುಕ್ತ ಅಧಿಕಾರಿ ಎಂದು ವಂಚನೆ ಮಾಡಲು ಯತ್ನಿಸಿದ ಆರೋಪಿಯನ್ನು ವಿಜಯಪುರ ಪೊಲೀಸರು ಬಂಧಿಸಿದ್ದಾರೆ.
ವಿಜಯಪುರ ಜಿಲ್ಲೆಯ ಆಲಮಟ್ಟಿಯ ಕೆಬಿಜೆಎನ್ಎಲ್ ಅಧಿಕಾರಿ ಅಶೋಕ ತಿಪ್ಪಣ್ಣ ಬಿರಾದಾರ್ ಎಂಬುವರಿಗೆ ಪ್ರಕರಣವೊಂದರಲ್ಲಿ ತಮ್ಮನ್ನು ವಿಚಾರಣೆಗೆ ಒಳಪಡಿಸಬೇಕಾಗುತ್ತದೆ. ಅದನ್ನು ಮುಚ್ಚಿ ಹಾಕಲು ಹಣ ನೀಡಬೇಕು ಎಂದು ನಕಲಿ ಲೋಕಾಯುಕ್ತ ಅಧಿಕಾರಿ 70 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ.
ಈ ಕುರಿತು ಮುದ್ದೇಬಿಹಾಳ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣದ ಕಾರ್ಯಾಚರಣೆ ನಡೆಸಿದ ಪೊಲೀಸರು ಕೊನೆಗೂ ನಕಲಿ ಲೋಕಾಯುಕ್ತ ಅಧಿಕಾರಿಯನ್ನ ಬಂಧಿಸಿದ್ದಾರೆ. ಇನ್ನು ಬಂಧಿತ ಆರೋಪಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾ ಗ್ರಾಮದ ನಿವಾಸಿ ಮುರಿಗೆಪ್ಪ ಕಂಬಾರ (57) ತಾನೂ ಲೋಕಾಯುಕ್ತ ಡಿವೈಎಸ್‌ಪಿ ಎಂದು ಅಧಿಕಾರಿಗಳನ್ನು ವಂಚಿಸುತ್ತಿದ್ದ ಎನ್ನಲಾಗಿದೆ.
ಈ ನಕಲಿ ಅಧಿಕಾರಿಯ ಮೇಲೆ ಮೋಸ, ವಂಚನೆ ಹಾಗೂ ಸೈಬರ್ ಅಪರಾಧಗಳಿಗೆ ಸಂಭಂದಿಸಿದಂತೆ ಒಟ್ಟು ರಾಜ್ಯದ ವಿವಿಧ ಠಾಣೆಯಲ್ಲಿ 57 ಪ್ರಕರಣಗಳು ದಾಖಲಾಗಿವೆ ಎನ್ನಲಾಗಿದೆ.
ಮಂಜು ಕಲಾಲ, ಪಬ್ಲಿಕ್ ನೆಕ್ಸ್ಟ, ವಿಜಯಪುರ
PublicNext
02/02/2025 12:34 pm